No Result
View All Result
MODEL DEMOCRACY AT KRCS
English Articles

Model Democracy At KRCS | Student Council Election Concluded Successfully

by ಕಲ್ಪ ನ್ಯೂಸ್
June 22, 2026
0

Kalpa Media House  |  Shikaripura  | Kumadvathi Residential Central School (KRCS) conducted its Student Council Election for the academic year...

Read moreDetails
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
  • Advertise With Us
  • Grievances
  • About Us
  • Contact Us
Monday, June 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಯುವಕರಿಗೆ ಹೆಚ್ಚಿನ ಬೆಂಬಲ, ಪ್ರೋತ್ಸಾಹ ನೀಡಲು ನೂತನ ಯುವನೀತಿ : ಮುಖ್ಯಮಂತ್ರಿ ಬೊಮ್ಮಾಯಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 12, 2022
in ಬೆಂಗಳೂರು ನಗರ
0
ಯುವಕರಿಗೆ ಹೆಚ್ಚಿನ ಬೆಂಬಲ, ಪ್ರೋತ್ಸಾಹ ನೀಡಲು ನೂತನ ಯುವನೀತಿ : ಮುಖ್ಯಮಂತ್ರಿ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಸರ್ಕಾರ ಹೊಸ ಯುವ ನೀತಿಯನ್ನು ತರಲು ಉದ್ದೇಶಿಸಿದ್ದು, ಮುಂಬರುವ ವರ್ಷಗಳಲ್ಲಿ ಈ ನೀತಿ ಯುವಕರಿಗೆ ಮಾದರಿ ರೀತಿಯಲ್ಲಿ ಮಾರ್ಗದರ್ಶನ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಸ್ವಾಮಿ ವಿವೇಕಾನಂದರ 159 ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ವರ್ಚುಯಲ್ ಆಗಿ ಭಾಗವಹಿಸಿ ಮಾತನಾಡಿ, ಯುವಕರಿಗಾಗಿ ತತ್ವಾಧಾರಿತವಾದಂತಹ ವೈಚಾರಿಕೆ ನೆಲೆಯಲ್ಲಿ ಹೆಚ್ಚಿನ ಬೆಂಬಲ, ಪ್ರೋತ್ಸಾಹ ನೀಡಲು ಸರ್ಕಾರ ಸಿದ್ಧವಿದೆ. ಈ ದಿಸೆಯಲ್ಲಿ ವಿಶೇಷ ಯೋಜನೆಯೊಂದನ್ನು ಮುಂದಿನ ಆಯವ್ಯಯದಲ್ಲಿ ತರಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ನಮ್ಮ ಜೀವನದಲ್ಲಿ ಸ್ವಾಮಿ ವಿವೇಕಾನಂದರು ಸದಾ ಪ್ರಸ್ತುತವಾಗಿರುತ್ತಾರೆ. ಸಾರ್ಥಕತೆಯ ಹಾಗೂ ಸಾಧನೆಯ ಬದುಕನ್ನು ನಡೆಸಿ ಹಾಗೂ ಸಾವಿನ ನಂತರವೂ ಬದುಕುವ ರೀತಿಯನ್ನು ತಿಳಿಸಿದ್ದಾರೆ ಎಂದರು.

ಸಾಧಕನಿಗೆ ಸಾವು ಅಂತ್ಯವಲ್ಲ :
ಸ್ವಾಮಿ ವಿವೇಕಾನಂದರ ಲೈಫ್ ಆಫ್ಟರ್ ಡೆತ್ ಎಂಬ ಪುಸ್ತಕವನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು, ವಿವೇಕಾನಂದರ ಸಾವಿನ ನಂತರದ ಬದುಕು ಎನ್ನುವ ಕಲ್ಪನೆ ಅದ್ಬುತವಾದದ್ದು. ಸಾಧಕನಿಗೆ ಸಾವು ಅಂತ್ಯವಲ್ಲ. ಸಾವಿನ ನಂತರವೂ ಬದುಕುವುದು ಸಾಧನೆ ಎಂಬುದನ್ನು ಪ್ರತಿಪಾದಿಸಿದ್ದರು. ಚೈತನ್ಯಮಯ ಬದುಕಿನ ದಾರಿಯನ್ನು ತೋರಿಸಿಕೊಟ್ಟಿದ್ದಾರೆ ಎಂದರು.

ಸ್ವಾಮಿ ವಿವೇಕಾನಂದರ ಬದುಕಿನ ರೀತಿ ನೀತಿಗಳನ್ನು ಯುವಜನತೆಗೆ ಮನದಟ್ಟು ಮಾಡುವ ಕೆಲಸ ಮಾಡಬೇಕಿದೆ. ಸರ್ಕಾರ ಹಾಗೂ ಸಮಾಜ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ರಾಮಕೃಷ್ಣ ಪರಮಹಂಸ, ಶಾರದಾದೇವಿ ಹಾಗೂ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಸಮಾಜಕ್ಕೆ ಪ್ರಚುರ ಪಡಿಸುವ ಕೆಲಸವನ್ನು ರಾಮಕೃಷ್ಣ ಮಿಷನ್ ಸಂಸ್ಥೆ ಪರಿಣಾಮಕಾರಿಯಾಗಿ ಮಾಡುತ್ತಿದೆ ಎಂದರು.

ಯುಗಪುರುಷ:
ಸ್ವಾಮಿ ವಿವೇಕಾನಂದರು ಯುಗಪುರುಷರು. ಯುಗದಲ್ಲಿ ಒಬ್ಬರು ಅತ್ಯಂತ ತೇಜ್ವಸಿಯಾಗಿ ವಿಭಿನ್ನವಾಗಿ ಹುಟ್ಟುತ್ತಾರೆ. ಅವರ ಅರ್ಥಪೂರ್ಣವಾಗಿ ಪುನರ್ ನಾಮಕರಣವನ್ನು ರಾಮಕೃಷ್ಣ ಪರಮಹಂಸರು ಮಾಡಿದ್ದಾರೆ. ಎಲ್ಲಿ ವಿವೇಕ ಇದೆಯೋ ಅಲ್ಲಿ ಆನಂದ ಇದೆ ಎಂದು. ವಿವೇಕ ಎನ್ನುವುದು ಪ್ರತಿ ಮನುಷ್ಯನ ಅಂತರ್ಗತವಾದ ಗುಣಧರ್ಮ. ವಿವೇಕ ಎನ್ನುವುದು ಪ್ರಾಣಿಗಳಿಂದ ಮನುಷ್ಯನನ್ನು ಪ್ರತ್ಯೇಕ ಮಾಡುವುದು. ಈ ವಿವೇಕವನ್ನು ನಾವು ಯಾವ ರೀತಿ, ಯಾವ ದಿಕ್ಕಿನಲ್ಲಿ ಯಾವುದಕ್ಕೆ ಬಳಕೆ ಮಾಡುತ್ತೇವೆ ಎನ್ನುವುದು ಬಹಳ ಮುಖ್ಯ. ಸ್ವಾಮಿ ವಿವೇಕಾನಂದರು ನಮಗೆ ದಾರಿ ತೋರಿದ್ದಾರೆ. ವಿವೇಕವನ್ನು ಯಾವ ರೀತಿ, ಯಾವುದಕ್ಕೆ ಬಳಸಬೇಕು. ಬದುಕನ್ನು ತನಗಾಗಿ ಬದುಕುವುದು ಸಹಜ. ಪರರಿಗಾಗಿ ಬದುಕುವುದು ಧರ್ಮ ಎಂದು ಸ್ವಾಮಿ ವಿವೇಕಾನಂದರು ತೋರಿಸಿಕೊಟ್ಟಿದ್ದಾರೆ ಎಂದರು.

ಹಲವು ಆಯಾಮಗಳ ವ್ಯಕ್ತಿತ್ವ
ಸ್ವಾಮಿ ವಿವೇಕಾನಂದ ವ್ಯಕ್ತಿತ್ವ ಹಲವು ಆಯಾಮಗಳಿಂದ ಕೂಡಿದೆ. ಕೇವಲ ತತ್ವಜ್ಞಾನ ಧರ್ಮ ಮಾತ್ರವಲ್ಲದೆ, ವಾಸ್ತವಿಕ ಬದುಕಿನ ಮೇಲೆ ಕೂಡ ಬೆಳಕನ್ನು ಚೆಲ್ಲುವ ಕೆಲಸವನ್ನು ಮಾಡಿದ್ದಾರೆ. ಸವಾಲುಗಳನ್ನು ಯಾವ ತತ್ವದ ಆಧಾರದ ಮೇಲೆ ನಾವು ಎದುರಿಸಬೇಕೆನ್ನುವುದನ್ನು ಅವರ ಬದುಕು ಮತ್ತು ವಿಚಾರಧಾರೆಯಲ್ಲಿಕಂಡುಕೊಳ್ಳುತ್ತೇವೆ. ಯಾವುದೇ ಒಂದು ವಿಚಾರಕ್ಕೆ ಅವರು ಸೀಮಿತರಾಗಿರಲಿಲ್ಲ. ಸೃಷ್ಟಿಕರ್ತನ ಮೂಲಕ್ಕೆ ಹೋಗಬಹುದೆಂದು ತೋರಿಸಿದ್ದಾರೆ. ಅವರ ಆಲೋಚನೆ ಹಾಗೂ ವಿಚಾರಗಳು ದೇಶ, ಗಡಿಗಳನ್ನು ದಾಟಿ ಅನಂತವಾಗಿತ್ತು.

ಯುವಶಕ್ತಿಯಲ್ಲಿ ನಂಬಿಕೆ:
ಯುವಶಕ್ತಿಯಲ್ಲಿ ವಿವೇಕಾನಂದರಿಗೆ ಅಪಾರವಾದ ನಂಬಿಕೆ ಇತ್ತು. ಏನನ್ನಾದರೂ ಸಾಧಿಸಬಹುದಾದರೆ ದೊಡ್ಡ ಬದಲಾವಣೆಯನ್ನು ತಮ್ಮ ಹಾಗೂ ಇತರರ ಬದುಕಿನಲ್ಲಿ ತರಬೇಕಾದರೆ ಅದು ಯೌವ್ವನದಲ್ಲಿ ಮಾತ್ರ ಸಾಧ್ಯ ಎನ್ನುವುದು ಅವರ ಪ್ರಬಲವಾದ ನಂಬಿಕೆ. ಆ ನಂಬಿಕೆಗೆ ಅನುಗುಣವಾಗಿ ಅವರ ಬದುಕನ್ನು ನಡೆಸಿದ್ದರು. ತಮ್ಮ ವಿಭಿನ್ನ ಚಿಂತನೆಯಿಂದ ವೈಚಾರಿಕ ಕ್ರಾಂತಿಯನ್ನು ತರುವ ನಿರ್ಣಯಗಳನ್ನು ಸ್ವಾಮಿ ವಿವೇಕಾನಂದರು ಜೀವನದುದ್ದಕ್ಕೂ ಕೈಗೊಂಡಿದ್ದಾರೆ. ಸಾವಿನ ನಂತರವೂ ಬದುಕಿದ ಮಹಾತ್ಮರಾಗಿದ್ದರು. ಬದುಕಿನ ಯಶಸ್ಸು ಹಾಗೂ ಸಾಧನೆಗಳನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಿದವರು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಡಾ. ಅಶ್ವತ್ಥ್ ನಾರಾಯಣ್, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ, ರಾಮಕೃಷ್ಣ ಮಠದ ಸ್ವಾಮೀಜಿಗಳು, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState NewsVivekananda Jayanthiಬೆಂಗಳೂರುಸ್ವಾಮಿ ವಿವೇಕಾನಂದರ ಜಯಂತಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜನನಿ ಜಾಗೃತಿ ಜಾಥಾಕ್ಕೆ ಶಾಸಕ ಹಾಲಪ್ಪ ಚಾಲನೆ

Next Post

ಕಾಂಗ್ರೆಸ್ ಪಾದಯಾತ್ರೆಗೆ ಚಾಲನೆ ನೀಡಿದ್ದ ಖರ್ಗೆಗೆ ಕೊರೋನಾ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಾಂಗ್ರೆಸ್ ಪಾದಯಾತ್ರೆಗೆ ಚಾಲನೆ ನೀಡಿದ್ದ ಖರ್ಗೆಗೆ ಕೊರೋನಾ

ಕಾಂಗ್ರೆಸ್ ಪಾದಯಾತ್ರೆಗೆ ಚಾಲನೆ ನೀಡಿದ್ದ ಖರ್ಗೆಗೆ ಕೊರೋನಾ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
South Western Railway Gears Up for Safe Monsoon Operations

ಮಳೆಗಾಲದ ಪ್ರಯಾಣಿಕರ ಸುರಕ್ಷತೆಗೆ ನೈಋತ್ಯ ರೈಲ್ವೆಯ ಮುನ್ನೆಚ್ಚರಿಕಾ ಕ್ರಮಗಳೇನು?

June 22, 2026
New Milestone in Athletics JSW Sports Achievement Recognized

ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು | ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸಾಧನೆಗೆ ಮನ್ನಣೆ!

June 22, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
MODEL DEMOCRACY AT KRCS

ಕುಮದ್ವತಿ ವಸತಿ ಶಾಲೆಯಲ್ಲಿ ಮಾದರಿ ಪ್ರಜಾಪ್ರಭುತ್ವ | ವಿದ್ಯಾರ್ಥಿ ಸಂಘದ ಚುನಾವಣೆ ಯಶಸ್ವಿ

June 22, 2026
ಸೇನಾ ದಾಳಿಯಿಂದ ದೇಶದ ಒಳಗಿನ ಶತ್ರುಗಳಿಗೂ ನಡುಕ ಪ್ರಾರಂಭ | ಕೆ.ಎಸ್. ಈಶ್ವರಪ್ಪ

ಪ್ರಿಯಾಂಕ ಖರ್ಗೆಗೆ ಸಂವಿಧಾನದ ಅರಿವಿಲ್ಲ: ಮಾಜಿ ಡಿಸಿಎಂ ಈಶ್ವರಪ್ಪ

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL