ಕಲ್ಪ ಮೀಡಿಯಾ ಹೌಸ್ | ಸಾಗರ |
ಮೀಸಲು ಅರಣ್ಯದ ಹೆಸರಿನಲ್ಲಿ ರೈತರು ಸಾಗುವಳಿ ಮಾಡಿಕೊಂಡಿರುವ ಜಮೀನನ್ನು ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡಿಸುವ ಕ್ರಮ ಸೂಕ್ತವಲ್ಲ. ರೈತರನ್ನು ಒಕ್ಕಲೆಬ್ಬಿಸುವ ಅರಣ್ಯ ಇಲಾಖೆ ಕ್ರಮಕ್ಕೆ ನನ್ನ ವಿರೋಧವಿದೆ ಎಂದು ಶಾಸಕ ಹಾಲಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಅರಣ್ಯ ವ್ಯವಸ್ಥಾಪನಾ ಸಮಿತಿಯಿಂದ ಸಾಗರ ತಾ. ಚಿಕ್ಕನೆಲ್ಲೂರು ಗ್ರಾಮದಲ್ಲಿ ಏರ್ಪಡಿಸಿದ್ದ ರೈತರ ಅರ್ಜಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನೋಟಿಸ್ ನೀಡಿದ ಮಾತ್ರಕ್ಕೆ ರೈತರನ್ನು ಒಕ್ಕಲೆಬ್ಬಿಸುತ್ತಾರೆ ಎಂದು ಭಾವಿಸುವುದು ಬೇಡ. ಶೀಘ್ರದಲ್ಲಿ ಜಿಲ್ಲಾಧಿಕಾರಿಗಳನ್ನು, ಹಿರಿಯ ಅರಣ್ಯಾಧಿಕಾರಿಗಳನ್ನು ಕರೆಸಿ ನೋಟಿಸ್ ನೀಡುತ್ತಿರುವ ಬಗ್ಗೆ ಚರ್ಚಿಸಲಾಗುವುದು. ಮೀಸಲು ಅರಣ್ಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಲ್ಲಿ ತಿದ್ದುಪಡಿ ಆಗಬೇಕಿದೆ. ಅಧಿವೇಶನ ಹಾಗೂ ಇನ್ನಿತರೆ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮಟ್ಟದಲ್ಲಿ ಹಲವು ಬಾರಿ ಚರ್ಚಿಸಲಾಗಿದೆ. ಈ ಹಿಂದೆ ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚಿಸಿದ್ದೇವೆ. ರೈತರು ಯಾವುದೇ ಗೊಂದಲಕ್ಕೆ ಒಳಗಾಗಬಾರದು, ಉಳುವವನೆ ಹೊಲದೊಡೆಯ. ನಾನು ನಿಮ್ಮ ಹೋರಾಟಕ್ಕೆ ಬೆಂಬಲ ನೀಡುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕೆಡಿಪಿ ಸದಸ್ಯರಾದ ದೇವೇಂದ್ರಪ್ಪ ಯಲಕುಂದ್ಲಿ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post