ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಿರ್ಮಾಣವಾಗುತ್ತಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಸ್ಥಳಕ್ಕೆ ಸಂಸದ ರಾಘವೇಂದ್ರ ಭೇಟಿ ನೀಡಿ ಕಾಮಗಾರಿಯನ್ನು ವೀಕ್ಷಿಸಿ ಆಸ್ಪತ್ರೆಯಲ್ಲಿ ಆಗಬೇಕಾದ ಮಾರ್ಪಡುಗಳು ಮತ್ತು ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಸಿಗಬೇಕಾದ ಸೇವೆಗಳು, ಬ್ಲ ಡ್ ಯೂನಿಟ್ ಘಟಕ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಉಪ ನಿರ್ದೇಶಕರಾದ ಡಾ. ರಾಜಕುಮಾರ್, ಶಿಕಾರಿಪುರ ತಾಲ್ಲೂಕಿನ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಶಿವಾನಂದ, ವೈದ್ಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post