ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವೀರಶೈವ ಸಮಾಜದ ಹಿರಿಯ ಮುಖಂಡರು, ವಿನಾಯಕ ಬಸ್ ಮಾಲೀಕರಾದ ಕೂಡ್ಲಿಗೆರೆ ಎಂ. ನಾಗರಾಜ್ (67) ಸೋಮವಾರ ನಿಧನ ಹೊಂದಿದ್ದಾರೆ.
ನಾಗರಾಜ್ ಅವರು ತಾಲೂಕಿನಲ್ಲಿ ವೀರಶೈವ ಸಮಾಜ ಸಂಘಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅಲ್ಲದೆ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದು, ಇವರ ಅಂತ್ಯಕ್ರಿಯೆ ಮಂಗಳವಾರ ಕೂಡ್ಲಿಗೆರೆ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಶಾಸಕ ಬಿ.ಕೆ ಸಂಗಮೇಶ್ವರ್ ಸಂತಾಪ:
ಕೂಡ್ಲಿಗೆರೆ ಎಂ. ನಾಗರಾಜ್ ನಿಧನದ ವಿಷಯ ತಿಳಿದು ಮನಸ್ಸಿಗೆ ತುಂಬಾ ನೋವುಂಟಾಯಿತು. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
ಇವರ ನಿಧನಕ್ಕೆ ಶ್ರೀಮದ್ ರಂಭಾಪುರಿ ಜಗದ್ಗುರುಗಳು, ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಹಟ್ಟಿ ಚಿನ್ನದ ಗಣಿ ನಿಯಮಿತ ನಿರ್ದೇಶಕ ಕೂಡ್ಲಿಗೆರೆ ಹಾಲೇಶ್ ಸೇರಿದಂತೆ ವೀರಶೈವ ಸಮಾಜದ ವಿವಿಧ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸಮಾಜದ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post