ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಮತ್ತು ಮಹಾನಗರಪಾಲಿಕೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ನಗರದ ಪಾಲಿಕೆ ವ್ಯಾಪ್ತಿಯ ಹೊರವಲಯದಲ್ಲಿ ಬರುವ ಪ್ರದೇಶಗಳಿಗೆ ನಿರಂತರ ಒತ್ತಡಯುಕ್ತ ಕುಡಿಯುವ ನೀರು ಸರಬರಾಜು ವಿತರಣಾ ವ್ಯವಸ್ಥೆಯನ್ನು ಕಲ್ಪಿಸುವ ರೂ. 96.50 ಕೋಟಿ ಅಂದಾಜು ವೆಚ್ಚದ ಯೋಜನೆ ಕಾಮಗಾರಿ ಶಂಕುಸ್ಥಾಪನೆಯನ್ನು ಜ.19 ರ ಬೆಳಿಗ್ಗೆ 11 ಗಂಟೆಗೆ ಗುಡ್ಡೇಕಲ್ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದ ಆವರಣದಲ್ಲಿರುವ ಮೇಲ್ಮಟ್ಟದ ಜಲಸಂಗ್ರಹಗಾರದ ಹತ್ತಿರ ನೆರವೇರಿಸಲಾಗುವುದು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಗೌರವಾನ್ವಿತ ಉಪಸ್ಥಿತಿ ಇರಲಿದ್ದು, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಇವರು ಶಂಕುಸ್ಥಾಪನೆ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ವಿಶೇಷ ಆಹ್ವಾನಿತರಾಗಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ನಗರಾಭಿವೃದ್ದಿ ಸಚಿವ ಬಿ.ಎ. ಬಸವರಾಜ(ಭೈರತಿ), ಶಾಸಕರು ಹಾಗೂ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಶಾಸಕರು ಹಾಗೂ ಕ.ನ.ನೀ.ಸ ಮತ್ತು ಒ.ಚ.ಮಂಡಳಿ ಅಧ್ಯಕ್ಷರಾದ ನರಸಿಂಹ ನಾಯಕ(ರಾಜುಗೌಡ) ಇವರು ಪಾಲ್ಗೊಳ್ಳುವರು.
ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಮಹಾನಗರಪಾಲಿಕೆ ಮಹಾಪೌರರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರ, ಸಮಿತಿಗಳ, ಅಧ್ಯಕ್ಷರು, ಉಪ ಮಹಾಪೌರರು, ಪಾಲಿಕೆ ಆಡಳಿತ ಪಕ್ಷದ ನಾಯಕರು, ಸ್ಥಾಯಿ ಸಮಿತಿ ಅಧ್ಯಕ್ಷರು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಸರ್ಕಾರದ ಕಾರ್ಯದರ್ಶಿಗಳು, ಕ.ನ.ನೀ.ಸ ಮತ್ತು ಒ.ಚ.ಮಂಡಳಿ ವ್ಯವಸ್ಥಾಪಕ ನಿರ್ದೇಶಕರು, ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಕ.ನ.ನೀ.ಸ ಮತ್ತು ಒ.ಚ.ಮಂಡಳಿ ಮುಖ್ಯ ಮತ್ತು ಕಾರ್ಯಪಾಲಕ ಅಭಿಯಂತರರು, ಪಾಲಿಕೆ ಆಯುಕ್ತರು ಪಾಲ್ಗೊಳ್ಳುವರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post