ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸ್ಮಾರ್ಟ್ ಸಿಟಿ ಕಾಮಗಾರಿಯ ಮೇಲೆ ನಿಗಾವಹಿಸಿ ಕಾಮಗಾರಿಯಿಂದ ಉಂಟಾಗುವ ಮಾಲಿನ್ಯವನ್ನು ತಡೆಯಬೇಕಾಗಿರೋ ಮಾಲಿನ್ಯ ನಿಯಂತ್ರಣ ಮಂಡಳಿಯವರು ಯಾವ ಕ್ರಮಕ್ಕೂ ಮುಂದಾಗದೇ ನಿರ್ಲಕ್ಷ ವಹಿಸಿದ್ದು, ಈ ಕಾರಣ ಇಂದು ಶಿವಮೊಗ್ಗ ಜಿಲ್ಲಾ ಆಮ್ ಆದ್ಮಿ ಪಾರ್ಟಿ ವತಿಯಿಂದ ಇಂದು ಮಾಲಿನ್ಯ ನಿಯಂತ್ರಣ ಮಂಡಳಿ ಕಛೇಯ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ದಿನ ಕಳೆದಂತೆ ಶಿವಮೊಗ್ಗ ನಗರ ವೇಗವಾಗಿ ಬೆಳೆಯುತ್ತಿದ್ದು ಇದಕ್ಕೆ ಪೂರಕವಾಗಿ ಸರ್ಕಾರ ಹಾಗೂ ಸರ್ಕಾರಿ ಇಲಾಖೆಗಳು ಜನರಿಗೆ ಮೂಲ ಭೂತ ಸೌಕರ್ಯಗಳನ್ನು ಒದಗಿಸಬೇಕು. ಆದರೆ ಮುಲಾಜಿಲ್ಲದೆ ಜನರಿಂದ ತೆರಿಗೆ ಹಣವನ್ನು ವಸೂಲಿ ಮಾಡುವ ಸರ್ಕಾರ ಜನರನ್ನು ಸಂಪೂರ್ಣವಾಗಿ ಮರೆತಂತೆ ಕಾಣುತ್ತೆ ಇದಕ್ಕೆ ತಾಜಾ ಉದಾಹರಣೆ ಎಂದರೆ ಶಿವಮೊಗ್ಗ ನಗರದಲ್ಲಿ ನಡೆಯುತ್ತಿರೋ ಸ್ಮಾರ್ಟ್ ಸಿಟಿ ಕಾಮಗಾರಿ ಎಂದು ಹೇಳಿದರು.

ಶಿವಮೊಗ್ಗ ನಗರದಲ್ಲಿ ಅಭಿವೃದ್ದಿ ಮಾಡುತ್ತೇವೆ ಎಂದು ಹೇಳಿ ಸ್ಮಾರ್ಟ್ ಸಿಟಿ ಕಾಮಗಾರಿ ಪ್ರಾರಂಭಿಸಿ ಆಮೇಗತಿಯಲ್ಲಿ ಕಾಮಗಾರಿ ಸಾಗುತ್ತಿದ್ದು ಇದರ ಪರಿಣಾಮ ಸಂಪೂರ್ಣ ಶಿವಮೊಗ್ಗ ನಗರ ಧೂಳಿನಿಂದ ಕೂಡಿದ್ದು ಜನರ ಆರೋಗ್ಯದ ಮೇಲೆ ವೆತಿರಿಕ್ತ ಪರಿಣಾಮ ಬೀರುತ್ತಿದೆ. ಸರ್ಕಾರ ಹಾಗೂ ಅಧಿಕಾರಿಗಳು ಸಂಪೂರ್ಣವಾಗಿ ಜನರನ್ನ ಮರೆತಂತ್ತೆ ಕಾಣುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















