ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಆಟೋ ಕಾಂಪ್ಲೆಕ್ಸ್ ಬಳಿಯಲ್ಲಿ ಇಂದು ರಾತ್ರಿ ಆಕಸ್ಮಿಕ ಅಗ್ನಿ ಅನಾಹುತ ಸಂಭವಿಸಿದ್ದು, ಘಟನೆಯಲ್ಲಿ ಮೂರು ಕಾರುಗಳು ಬೆಂಕಿಗೆ ಆಹುತಿಯಾಗಿವೆ.
ವಿನೋಬನಗರದ ಆಟೋ ಕಾಂಪ್ಲೆಕ್ಸ್ ಬಳಿಯ 1ನೆಯ ತಿರುವಿನಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಪರಿಣಾಮವಾಗಿ ಕೆಲವೇ ಕ್ಷಣಗಳಲ್ಲಿ ಮೂರು ಕಾರುಗಳು ಸುಟ್ಟು ಭಸ್ಮವಾಗಿವೆ. ವಿಷಯ ತಿಳಿದ ಕೆಲವೇ ಕ್ಷಣಗಳಲ್ಲಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ಅಗ್ನಿ ಅನಾಹುತಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಇತ್ತೀಚೆಗೆ ಭದ್ರಾವತಿಯ ಸಾಮಿಲ್’ವೊಂದರಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದ ಸಂದರ್ಭದಲ್ಲೂ ಸಹ ಅಗ್ನಿಶಾಮಕ ಅಧಿಕಾರಿ ಹಾಗೂ ಸಿಬ್ಬಂದಿಗಳ ಕ್ಷಿಪ್ರ ಹಾಗೂ ಚಾಣಾಕ್ಷತನದ ಕಾರ್ಯಾಚರಣೆಯಿಂದ ಸಂಭವನೀಯ ಭಾರೀ ಅನಾಹುತವೊಂದು ತಪ್ಪಿದ್ದನ್ನು ಇಲ್ಲಿ ಸ್ಮರಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 
	    	


 Loading ...
 Loading ... 
							



 
                
Discussion about this post