ಇಂಫಾಲ, ಅ.24: ಮಣಿಪುರ ಮುಖ್ಯಮಂತ್ರಿ ಒಕ್ರೋಮ್ ಇಬೋಬಿ ಸಿಂಗ್ ಗುಂಡಿನ ದಾಳಿಯಿಂದ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಸಲುವಾಗಿ ಒಕ್ರೋಮ್ ಇಬೋಬಿ ಸಿಂಗ್ ಉಖ್ರುಲ್ ಜಿಲ್ಲೆಗೆ ಭೇಟಿ ನೀಡಿದ್ದರು. ಹೆಲಿಪ್ಯಾಡ್‌ನಲ್ಲಿ ಇಳಿಯುತ್ತಿದ್ದಂತೆಯೇ ಅವರ ಮೇಲೆ ಗುಂಡಿನ ದಾಳಿ ನಡೆದಿದೆ.
ಗುಂಡು ಗುರಿ ತಪ್ಪಿದ್ದು, ಕೂದಲೆಳೆ ಅಂತರದಲ್ಲಿ ಒಕ್ರೋಮ್ ಇಬೋಬಿ ಸಿಂಗ್ ಅವರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಸ್ತುತ ಘಟನಾ ಸ್ಥಳದ ಸುತ್ತಮುತ ಪೊಲೀಸರ ಶೋಧ ಕಾರ್ಯ ನಡೆಸುತ್ತಿದ್ದು, ಶಂಕಿತರಿಗಾಗಿ ತೀವ್ರ ತಪಾಸಣೆ ನಡೆಯುತ್ತಿದೆ.
ನೂತನವಾಗಿ ನಿರ್ಮಾಣವಾಗುತ್ತಿರುವ ಆಸ್ಪತ್ರೆ ಆವರಣದಲ್ಲಿ ಜೀವಂತ ಬಾಂಬ್ ವೊಂದು ಪತ್ತೆಯಾಗಿದ್ದು, ಅದನ್ನು ಸಿಬ್ಬಂದಿಗಳು ನಿಷ್ಕ್ರಿಯ ಗೊಳಿಸಿದ್ದಾರೆ ಎನ್ನಲಾಗಿದೆ.
ಸರಣಿ ಸ್ಫೋಟ
ಉಖ್ರುಲ್ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಬಾಂಬ್ ಸ್ಫೋಟ ನಡೆದಿದೆ. ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇಂಡಿಯನ್ ರಿಸರ್ವ್ ಬೆಟಾಲಿಯನ್ (ಐಆರ್ ಬಿಎನ್) ನ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಘಟನೆಯ ಹಿಂದೆ ಪ್ರತ್ಯೇಕ ನಾಗಾಲ್ಯಾಂಡ್ ರಾಜ್ಯಕ್ಕಾಗಿ ಹೋರಾಟ ನಡೆಸುತ್ತಿರುವ ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್ ಸಂಘಟನೆಯ ಕೈವಾಡವಿದೆ ಎಂದು ಹೇಳಲಾಗುತ್ತಿದೆ. ಆಧರೆ, ಇದುವರೆಗೂ ಯಾವುದೇ ಸಂಘಟನೆ ಸ್ಫೋಟದ ಹೊಣೆ ಹೊತ್ತಿಲ್ಲ.
Discussion about this post