ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭಾರತ ಸ್ವಾತಂತ್ರ್ಯ ಹೋರಾಟದ ವೀರ ಸೇನಾನಿ ನೇತಾಜಿ ಸುಭಾಷ್ ಚಂದ್ರ ಭೋಸ್ ಅವರ 125ನೇ ಜನ್ಮ ದಿನದ ಅಂಗವಾಗಿ ಇಲ್ಲಿಯ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಪರಾಕ್ರಮ ದಿನವನ್ನು ಆಚರಿಸಿತಲ್ಲದೆ ರೋಟರಿ ಮಿಡ್ ಟೌನ್ ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಿತ್ತು.
ಕಮಲಾ ನೆಹರು ಮಹಿಳಾ ಕಾಲೇಜಿನ ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿಗಳಾದ ಡಾ.ಬಾಲಕೃಷ್ಣ ಹೆಗಡೆ ಮತ್ತಿತರರು ರಕ್ತದಾನ ಮಾಡಿದರು. ರಕ್ತ ನಿಧಿಕೇಂದ್ರದ ಡಾ.ರಜತ್, ಸತೀಶ್, ನಟರಾಜ, ಅಭಾವಿಪ ಪ್ರಮುಖರಾದ ಚಂದ್ರಶೇಖರ್, ವಿಜಯ್, ಪ್ರವೀಣ, ಎನ್. ನಾಗವೇಣಿ, ಎ.ಪಿ. ಅನ್ನಪೂರ್ಣ ಮೊದಲಾದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post