ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ |
ತಾಲೂಕಿನ ರಂಗವನಹಳ್ಳಿ ಗ್ರಾಮದಲ್ಲಿ ದೇವಸ್ಥಾನದ ಪೌರೋಹಿತ್ಯ ವಿಚಾರದಲ್ಲಿ ಎರಡೂ ಗುಂಪಿನ ನಡುವೆ ಜಗಳ ಏರ್ಪಟ್ಟು ಕೋಲಿನಿಂದ ಹಲ್ಲೆ ನಡೆಸಿದ ಪರಿಣಾಮವಾಗಿ ಹಲ್ಲೆಗೊಳಗಾದ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ.
ಗ್ರಾಮದ ದುರ್ಗಮ್ಮ ದೇವಸ್ಥಾನದ ಪೂಜಾರಿಕೆ ವಿಚಾರದಲ್ಲಿ ಜಯರಾಮಪ್ಪ ಮತ್ತು ಚನ್ನಪ್ಪ ಎಂಬುವರ ನಡುವೆ ಶನಿವಾರ ಸಂಜೆ ಗಲಾಟೆ ನಡೆದಿದ್ದು, ಕೋಪಗೊಂಡ ಚನ್ನಪ್ಪ ಮತ್ತು ಆತನ ಸಂಗಡಿಗರು ಜಯರಾಮಪ್ಪ ಮೇಲೆ ಹಲ್ಲೆ ನಡೆಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಜಯರಾಮಪ್ಪ (55) ಮೃತಪಟ್ಟಿದ್ದಾರೆ.
ಹಲ್ಲೆಗೈದ ಚನ್ನಪ್ಪ ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದು, ಆರೋಪಿಯನ್ನು ಕೂಡಲೇ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಜಯರಾಮಪ್ಪ ಪುತ್ರ ಚನ್ನಪ್ಪ ಓಬಳೇಶ, ಅರ್ಜನ್ ಒಬಳೇಶ, ಆಕಾಶ, ಮುಕುಂದ ಎಂಬುವವರು ಹಲ್ಲೆ ನಡೆಸಿ ತಮ್ಮ ತಂದಯನ್ನು ಕೊಲೆಗೈದಿದ್ದಾರೆಂದು ಜಯರಾಮಪ್ಪ ಪುತ್ರ ಪ್ರಕರಣದ ಬಗ್ಗೆ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ್, ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಜೆ.ಎಸ್. ಕುಮಾರಸ್ವಾಮಿ, ಡಿವೈಎಸ್ಪಿ ಕೆ.ವಿ. ಶ್ರೀಧರ್, ಸಿಪಿಐ ರಮಕಾಂತ್, ಪಿಎಗಳಾದ ಮಹೇಶ್ ಗೌಡ, ಮಾರುತಿ ಇಲಾಖೆ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಬ್ಬರು ಅಪರಾಧಿಗಳನ್ನು ವಶಕ್ಕೆ ಪಡೆದಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post