ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ |
ಸೊಸೆ ಅತ್ತೆಯನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ತಾಲೂಕಿನ ರಾಮಜೋಗಿಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
ರಾಮಜೋಗಿಹಳ್ಳಿ ಗ್ರಾಮದ ರುದ್ರಮ್ಮ ಕೊಲೆಯಾದ ಮಹಿಳೆಯಾಗಿದ್ದು, ಎಂದಿನಂತೆ ಮನೆಯಲ್ಲಿ ಮಲಗಿರುವಾಗ ಸೊಸೆ ಮುದ್ದಕ್ಕ ಅತ್ತೆಯನ್ನು ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾರೆ. ಇನ್ನು ಸೊಸೆ ಮಾನಸಿಕ ಅಸ್ವಸ್ಥರಾಗಿದ್ದಾರೆ ಎಂದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ.
ಶನಿವಾರ ರಾತ್ರಿ ಅತ್ತೆ ರುದ್ರಮ್ಮ ಮಲಗಿದ್ದ ವೇಳೆ ಸೊಸೆ ಸುತ್ತಿಗೆಯನ್ನು ತೆಗೆದುಕೊಂಡು ಅತ್ತೆಯ ತಲೆಗೆ ಹೊಡೆದು ಕೊಲೆ ಮಾಡಿದ್ದಾರೆ ಎನ್ನಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಚಿತ್ರದುರ್ಗ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಡಿವೈಎಸ್‌ಪಿ ಕೆ. ವಿ. ಶ್ರೀಧರ್, ಪೋಲಿಸ್ ಇನ್ಸ್‌ಪೆಕ್ಟರ್ ಎಸ್. ಜೆ. ತಿಪ್ಪೇಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post