Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ರಾಗಿ, ಭತ್ತ ಮುಂತಾದ ಉತ್ಪನ್ನಗಳಿಗೆ ನಿಗಧಿಗೊಳಿಸಿರುವ ಬೆಲೆ ಹೆಚ್ಚಿಸುವಂತೆ ಸಿದ್ಧರಾಮಯ್ಯ ಆಗ್ರಹ

January 25, 2022
in ಬೆಂಗಳೂರು ನಗರ
0 0
0
File Image

File Image

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಗಿ, ಭತ್ತ ಮುಂತಾದ ಉತ್ಪನ್ನಗಳಿಗೆ ನಿಗಧಿಗೊಳಿಸಿರುವ ಬೆಲೆಯನ್ನು ಹೆಚ್ಚಿಸಬೇಕು ಹಾಗೂ ಬೆಂಬಲ ಬೆಲೆಯಲ್ಲಿ ರಾಗಿಯನ್ನು ಖರೀದಿಸಲು ವಿಧಿಸಿರುವ ನಿರ್ಬಂಧಗಳನ್ನು ತೆಗೆದು ಹಾಕಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ‌ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.‌

ಇಡೀ ವರ್ಷ ಪದೇ ಪದೇ ಸುರಿದ ಮಳೆಯ ನಡುವೆಯೂ ರಾಗಿ, ಭತ್ತ ಮುಂತಾದ ಬೆಳೆಗಳನ್ನು ಕೊಯಿಲು ಮಾಡಿ ಮಾರುಕಟ್ಟೆಗೆ ತರುತ್ತಿದ್ದಾರೆ. ಸರ್ಕಾರವು ಈ ವರ್ಷ ಜನವರಿ 1 ರಿಂದ ರಾಗಿಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.

ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ ಜಿಲ್ಲೆಗಳ ಪ್ರಮುಖ ಬೆಳೆಯಾದ ರಾಗಿಯನ್ನು ಬೆಳೆಯುತ್ತಾರೆ. ಕೃಷಿ ಇಲಾಖೆಯ ಅಂದಾಜಿನ ಪ್ರಕಾರ ನಮ್ಮ ರೈತರು ಈ ವರ್ಷ ಸುಮಾರು 17.5 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆದಿದ್ದಾರೆ. ಕೃಷಿ ಇಲಾಖೆಯ ದಾಖಲೆಗಳ ಪ್ರಕಾರ ಈ ಬಾರಿ ಕನಿಷ್ಟ ಅಂದರೂ 14-15ಲಕ್ಷ ಟನ್ ಇಳುವರಿಯ ನಿರೀಕ್ಷೆ ಮಾಡಲಾಗಿದೆ. ಆದರೆ, ಅತಿವೃಷ್ಟಿಯ ಕಾರಣದಿಂದ ದೊಡ್ಡ ಮಟ್ಟದ ಬೆಳೆ ನಷ್ಟವಾಗಿತ್ತು. ಆದರೂ ರೈತರು ಬೆಂಬಲ ಬೆಲೆಯಡಿ ರಾಗಿಯನ್ನು ಮಾರಾಟ ಮಾಡಲು ಉತ್ಸಾಹ ತೋರಿಸುತ್ತಿದ್ದಾರೆ.

ಮಾತೆತ್ತಿದರೆ ರೈತರ ಆದಾಯ ದ್ವಿಗುಣ ಗೊಳಿಸಲಾಗುವುದು ಎಂದು ಮಾತನಾಡುವ ಪ್ರಧಾನಿ ಮೋದಿಯವರ ಸರ್ಕಾರ ಈ ಬಾರಿ ರಾಜ್ಯದ ರೈತರಿಂದ ಕೇವಲ 2.10 ಲಕ್ಷ ಟನ್ ರಾಗಿಯನ್ನು ಮಾತ್ರ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಸೂಚನೆಯನ್ನು ಆಧರಿಸಿ ರಾಜ್ಯದ ಬಿಜೆಪಿ ಸರ್ಕಾರವು ರೈತರಿಂದ ರಾಗಿ ಖರೀದಿಸಲು ವಿಪರೀತ ನಿಬಂಧನೆಗಳನ್ನು ವಿಧಿಸಿದೆ. ಅದರಲ್ಲಿ ಒಬ್ಬ ರೈತರಿಂದ ಕೇವಲ 20 ಕ್ವಿಂಟಾಲ್ ರಾಗಿಯನ್ನು ಮಾತ್ರ ಖರೀದಿ ಮಾಡಲಾಗುವುದೆಂದು ತಿಳಿಸಿ ಆದೇಶ ಹೊರಡಿಸಿದೆ.

ಯೂಕಲಿಪ್ಟಸ್ ಬೆಳೆಯನ್ನು ಬೆಳೆಯುತ್ತಿದ್ದ ರೈತರು ಕಳೆದ ಎರಡು ವರ್ಷಗಳಿಂದ ಈಚೆಗೆ ತಮ್ಮ ಹೊಲಗಳಲ್ಲಿ ಬೆಳೆದಿದ್ದ ಯೂಕಲಿಪ್ಟಸ್ ಬೆಳೆಯನ್ನು ತೆಗೆದು ಹಾಕಿ ರಾಗಿ ಬೆಳೆಯಲಾರಂಭಿಸಿದ್ದಾರೆ. ಹಾಗಾಗಿ ಸಹಜವಾಗಿಯೆ ರಾಗಿಯ ಉತ್ಪಾದನೆ ಹೆಚ್ಚಾಗಿದೆ. ರಾಗಿಗೆ ನೀಡುತ್ತಿರುವ ಬೆಂಬಲ ಬೆಲೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಒಂದು ಕ್ವಿಂಟಾಲಿಗೆ ಕೇವಲ 82 ರೂಪಾಯಿಗಳಷ್ಟು ಮಾತ್ರ ಏರಿಕೆ ಮಾಡಲಾಗಿದೆ. ಕಳೆದ ವರ್ಷ ಒಂದು ಕ್ವಿಂಟಾಲಿಗೆ 3295 ರೂ ನೀಡುತ್ತಿದ್ದರೆ ಈ ವರ್ಷ 3377 ಗಳಿಗೆ ಏರಿಕೆ ಮಾಡಲಾಗಿದೆ. ಆದರೆ ರೈತರು 2019-20 ರಲ್ಲಿ ಟ್ರಾಕ್ಟರ್‌ನಲ್ಲಿ ಒಂದು ಗಂಟೆ ಹೊಲ ಉಳಲು 750 ರೂಪಾಯಿ ನೀಡುತ್ತಿದ್ದರೆ ಈ ವರ್ಷ 1250-1300 ರೂ ನೀಡಬೇಕಾಗಿದೆ.

ಬೆಳೆಯನ್ನು ಕಟಾವು ಮಾಡುವ ಯಂತ್ರಕ್ಕೆ ಕೂಡ ಗಂಟೆಗೆ ಸುಮಾರು 750 ರೂಪಾಯಿಗಳಷ್ಟು ಹೆಚ್ಚಾಗಿದೆ. ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲ ಅವಶ್ಯ ವಸ್ತುಗಳ ಬೆಲೆ ಏರಿಕೆಯಾಗಿವೆ. ರೈತರು ಬಳಸುವ ಪ್ಲಾಸ್ಟಿಕ್ ಮುಂತಾದ ಉತ್ಪನ್ನಗಳ ಮೇಲಿನ ಜಿಎಸ್‌ಟಿಯನ್ನು ಸಹ ಹೆಚ್ಚಿಸಲಾಗಿದೆ. ಇದೆಲ್ಲದರಿಂದಾಗಿ ರೈತರು ಬೆಳೆಗಳನ್ನು ಬೆಳೆಯಲು ಉತ್ಪಾದನಾ ವೆಚ್ಚ ಸಿಕ್ಕಾಪಟ್ಟೆ ಹೆಚ್ಚಾಗಿದೆ.

ಡಾ. ಸ್ವಾಮಿನಾಥನ್ ಅವರ ವರದಿಯಲ್ಲಿನ ಸೂತ್ರಗಳನ್ನು ಪೂರ್ತಿಯಾಗಿ ಅಳವಡಿಸಿದರೆ ಒಂದು ಕ್ವಿಂಟಾಲ್ ರಾಗಿಗೆ ಈಗ ನಿಗಧಿಪಡಿಸಿರುವ ಬೆಂಬಲ ಬೆಲೆಯ ಎರಡರಷ್ಟನ್ನು ರೈತರಿಗೆ ನೀಡಬೇಕಾಗುತ್ತದೆ. ದೊಡ್ಡಬಳ್ಳಾಪುರ ಮುಂತಾದ ಕಡೆ ರೈತರು, ರೈತ ಸಂಘದವರು ರಾಗಿ ಖರೀದಿಗೆ ವಿಧಿಸಿರುವ ನಿಬಂಧನೆಗಳನ್ನು ತೆಗೆದು ಹಾಕುವಂತೆ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಕಳೆದ ವರ್ಷ ಸುಮಾರು 4.7 ಲಕ್ಷ ಟನ್ ಗಳಷ್ಟು ರಾಗಿಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಿದರೆ ಈ ಬಾರಿ ರಾಜ್ಯದಿಂದ ಕೇವಲ 2.10 ಲಕ್ಷ ಟನ್ ರಾಗಿಯನ್ನು ಖರೀದಿಸಲು ಮಾತ್ರ ರಾಜ್ಯಕ್ಕೆ ಅನುಮತಿ ನೀಡಲಾಗಿದೆ.

ರೈತರು 14-15 ಲಕ್ಷ ಟನ್ ರಾಗಿ ಬೆಳೆದರೆ ಅವರು ತಮ್ಮ ಸ್ವಂತ ಬಳಕೆಗೆ ಶೇ.50 ರಷ್ಟನ್ನು ಬಳಸುತ್ತಾರೆಂದರೆ ಉಳಿದದ್ದನ್ನು ಅವರು ಮಾರಲೇಬೇಕು. ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ರೈತರ ಉತ್ಪನ್ನಗಳನ್ನು ಖರೀದಿಸದಿದ್ದರೆ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಾರೆ.

ರೈತರು ಎಷ್ಟು ಕ್ವಿಂಟಾಲ್ ಖರೀದಿ ಕೇಂದ್ರಗಳಿಗೆ ತರುತ್ತಾರೊ ಅಷ್ಟನ್ನೂ ಖರೀದಿಸಬೇಕು. ಇಂದೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಕೇವಲ 2.10 ಲಕ್ಷ ಟನ್ ಖರೀದಿಸಲು ವಿಧಿಸಿರುವ ನಿರ್ಬಂಧವನ್ನು ತೆಗೆದು ಹಾಕಬೇಕು ಹಾಗೂ ಸ್ಥಗಿತಗೊಳಿಸಿರುವ ನೋಂದಣಿ ಕೇಂದ್ರಗಳನ್ನು ಕೂಡಲೆ ಪುನರಾರಂಭಿಸಬೇಕು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSiddaramaiahState Newsಬೆಂಗಳೂರುಸಿದ್ದರಾಮಯ್ಯ
Previous Post

ಮುಖ್ಯಮಂತ್ರಿ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಾರಿಗೆ ಇಲಾಖೆ ಪ್ರಗತಿ ಪರಿಶೀಲನಾ ಸಭೆ

Next Post

ಹೆಣ್ಣುಮಕ್ಕಳು ಪುರುಷರಿಗೆ ಸರಿಸಮಾನರಾಗಿ ಸಂಸಾರ ನಿರ್ವಹಿಸುವಲ್ಲಿ ಉನ್ನತ ಪಾತ್ರ : ಡಿ.ಎಸ್. ಅರುಣ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೆಣ್ಣುಮಕ್ಕಳು ಪುರುಷರಿಗೆ ಸರಿಸಮಾನರಾಗಿ ಸಂಸಾರ ನಿರ್ವಹಿಸುವಲ್ಲಿ ಉನ್ನತ ಪಾತ್ರ : ಡಿ.ಎಸ್. ಅರುಣ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025

ಯೋಗವು ಆರೋಗ್ಯಕರ ಜೀವನಶೈಲಿಯ ಅವಿಭಾಜ್ಯ ಅಂಗ: ಶ್ರೀ ಮ ನಿ ಪ್ರ ಮಹಾಂತ ಸ್ವಾಮೀಜಿ

June 24, 2025

ಕಾರ್ಯಕರ್ತರು ಜವಾಬ್ದಾರಿ ತೆಗೆದುಕೊಂಡು ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಬಲ ನೀಡಿ

June 24, 2025

ಜುಲೈ 6ರಂದು ವಿಪ್ರ ಯುವ ಮಹೋತ್ಸವ: ಅಭಿನವ ವಿದ್ಯಾಶಂಕರ ಭಾರತೀ ಶ್ರೀಗಳಿಂದ ಕಾರ್ಯಕ್ರಮಕ್ಕೆ ಚಾಲನೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025

ಯೋಗವು ಆರೋಗ್ಯಕರ ಜೀವನಶೈಲಿಯ ಅವಿಭಾಜ್ಯ ಅಂಗ: ಶ್ರೀ ಮ ನಿ ಪ್ರ ಮಹಾಂತ ಸ್ವಾಮೀಜಿ

June 24, 2025

ಕಾರ್ಯಕರ್ತರು ಜವಾಬ್ದಾರಿ ತೆಗೆದುಕೊಂಡು ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಬಲ ನೀಡಿ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!