ಕಲ್ಪ ಮೀಡಿಯಾ ಹೌಸ್ | ಹೊಸನಗರ |
ಜಮೀನು ವಿವಾದವನ್ನು ಗ್ರಾಮಪಂಚಾಯ್ತಿ ಪರಿಹರಿಸಬೇಕು ಎಂದು ಆಗ್ರಹಿಸಿದ ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಕುಳಿತ ಘಟನೆ ನಗರದಲ್ಲಿ ನಡೆದಿದೆ.
ಕೋಡೂರು ಗ್ರಾಮದ ಕೃಷ್ಣಮೂರ್ತಿ ಎಂಬ ವ್ಯಕ್ತಿ ಹಲವು ವರ್ಷಗಳಿಂದ ಜಮೀನು ವಿವಾದದಿಂದ ಬೇಸತ್ತು ಇಂದು ಮೊಬೈಲ್ ಟವರ್ ಏರಿ ಕುಳಿತು ಆತಂಕ ಸೃಷ್ಠಿಸಿದ್ದ. ಗ್ರಾಮಸ್ಥರಿಂದ ವಿಷಯ ತಿಳಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಸಮಸ್ಯೆ ಪರಿಹಾರ ಮಾಡುವುದಾಗಿ ಭರವಸೆ ನೀಡಿ ಮನವೊಲಿಸಿ, ಆತನನ್ನು ಟವರ್’ನಿಂದ ಕೆಳಕ್ಕೆ ಇಳಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post