ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಾರ್ಚ್ 22ರಿಂದ ಆರಂಭವಾಗಲಿರುವ ಕೋಟೆ ಶ್ರೀ ಮಾರಿಕಾಂಬಾ ಜಾತ್ರೆಗೆ ಸಾಂಪ್ರದಾಯಿಕವಾಗಿ ವಿದ್ಯುಕ್ತ ಚಾಲನೆ ನೀಡಲಾಯಿತು.
ಸಂಪ್ರದಾಯದಂತೆ ನಗರದ ಗಾಂಧಿ ಬಜಾರಿನ ಮಡಿವಾಳರ ಕೇರಿಯ ಶ್ರೀ ಅಂತರಘಟ್ಟಮ್ಮ ದೇವಿ ದೇವಸ್ಥಾನ ಸಮಿತಿಯ ವತಿಯಿಂದ ಮಡಿವಾಳ ಸಮಾಜದವರು ವನದಿಂದ ಮಾರಿಕಾಂಬೆ ದೇವಿಯ ವಿಗ್ರಹ ಕೆತ್ತನೆಗಾಗಿ ಮಾರಿ ಮರವನ್ನು ತರಲಾಯಿತು. ಗಾಂಧಿ ಬಜಾರ್ ಮುಖ್ಯರಸ್ತೆಯಲ್ಲಿರುವ ಶ್ರೀ ಮಾರಿಕಾಂಬ ದೇವಿಯ ತವರುಮನೆಯಲ್ಲಿ ಧಾರ್ಮಿಕ ವಿಧಿವಿಧಾನಗಳಿಗಾಗಿ ಮರವನ್ನು ಇರಿಸಿ, ಕೋಟೆ ಮಾರಿಕಾಂಬ ದೇವಿಯ ಜಾತ್ರೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















