ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೇಂದ್ರ ಸರ್ಕಾರವು 2022-23ನೇ ಸಾಲಿನ ಬಜೆಟ್ ಮಂಡಿಸಿದ್ದು, ಇದರಲ್ಲಿ ಸಹಕಾರ ವಲಯಕ್ಕೆ ಹಾಗೂ ಕೃಷಿ ವಲಯಕ್ಕೆ ಪೂರಕವಾದಂತಹ ಅಂಶಗಳನ್ನು ಸೇರಿವೆ. ಇದರಿಂದ ರೈತರಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ ಅಭಿಪ್ರಾಯಪಟ್ಟಿದ್ದಾರೆ.
ತೆರಿಗೆಯನ್ನು ಶೇ.18ರಿಂದ ಶೇ.15ಕ್ಕೆ ಇಳಿಕೆ ಮಾಡಿರುವುದರಿಂದ ಸಹಕಾರ ಮತ್ತು ಕೃಷಿ ವಲಯಕ್ಕೂ ಇದರಿಂದ ಅನುಕೂಲವಾಗಲಿದೆ. ಅತ್ಯುತ್ತಮ ಬಜೆಟ್ ಮಂಡಿಸಿ ರೈತರಿಗೆ ಅನುಕೂಲ ಮಾಡಿಕೊಟ್ಟ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಜಿಲ್ಲೆಯ ಎಲ್ಲಾ ಸಹಕಾರಿಗಳ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post