ಕಲ್ಪ ಮೀಡಿಯಾ ಹೌಸ್ | ಬೀದರ್ |
ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಬರೂರ ಗ್ರಾಮದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಮೂರ್ತಿ ಪ್ರಾಣ ಪ್ರತಿಷ್ಟಾಪನೆ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಪಾಲ್ಗೊಂಡರು.
ಬರೂರ ಗ್ರಾಮದ ಮಹರ್ಷಿ ವಾಲ್ಮೀಕಿ ದೇವಸ್ಥಾನದ ಆವರಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಮಾಯಣ ರಚಿಸುವ ಮೂಲಕ ಆದಿಕವಿ ಮಹರ್ಷಿ ವಾಲ್ಮೀಕಿರವರು ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡಿದ್ದಾರೆ. ಸಹೋದರರ ಸಂಬಂಧಗಳು ಹೇಗಿರಬೇಕು ಎಂಬ ಉತ್ತಮ ಸಂದೇಶವನ್ನು ರಾಮಾಯಣದ ಮೂಲಕ ತಿಳಿಸಿಕೊಟ್ಟಿದ್ದಾರೆ.
ಆದಿಕವಿ ಮಹರ್ಷಿ ವಾಲ್ಮೀಕಿ, ಅಂಬಿಗರ ಚೌಡಯ್ಯ, ಕನಕದಾಸರು, ಬುದ್ಧ, ಬಸವ, ಅಂಬೇಡ್ಕರ್ ರಂತಹ ಮಹಾತ್ಮರು ನೀಡಿರುವ ಉತ್ತಮ ಸಂದೇಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಮೌಲ್ಯಯುತವಾಗಿ ಬದುಕು ಸಾಗಿಸಬೇಕಾಗಿದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಈ ಸಂದರ್ಭದಲ್ಲಿ ಅಲ್ಲಮ ಪ್ರಭು ಸಂಸ್ಥಾನ ಮಠದ ಧರ್ಮರತ್ನ ಶ್ರೀ ಮಲ್ಲಣ್ಣಪ್ಪ ಮಹಾಸ್ವಾಮಿಗಳು, ಮಹರ್ಷಿ ವಾಲ್ಮೀಕಿ ಆಶ್ರಮ ಹಳ್ಳಿಖೇಡದ ಶ್ರೀ ದತ್ತಾತ್ರೇಯ ಸ್ವಾಮೀಜಿಗಳು, ಬಸವರಾಜ ಬುಳ್ಳಾ, ಚಂದ್ರಸಿಂಗ್, ಸುನೀಲ್ ಬಾವಿಕಟ್ಟಿ, ಬಕ್ಕಪ್ಪ ಶೇರಿಕರ್, ಅಮೃತರಾವ್ ಚಿಮ್ಕೊಡ್, ಲಕ್ಷ್ಮಣ್, ಚಂದ್ರಶೇಖರ್ ರೆಡ್ಡಿ ಪಾಟೀಲ್, ಮಾರುತಿ ಮಾಸ್ಟರ್, ಪಾಂಡುರಂಗ ಗೂರುಜಿ, ಸುನೀಲ್ ಖಾಶೆಂಪುರ್, ಶರಣಪ್ಪ ಖಾಶೆಂಪುರ್, ರಾಜಕುಮಾರ ಮಂದಾ, ಎಂಡಿ ಬಾಬಾ, ಸಂಜಯ್ ಯಾಕಾತಪೂರ, ಗೋಪಾಲ್ ಸ್ವಾಮಿ, ಸಂಜು, ಮೋಹನ್ ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post