ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ನಿಗದಿತ ದಿನಾಂಕ ಹಾಗು ವೇಳೆಯಲ್ಲಿ ಪಡಿತರ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿ ವತಿಯಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ನ್ಯಾಯಬೆಲೆ ಅಂಗಡಿಗಳಲ್ಲಿ ನಿಗದಿತ ದಿನಾಂಕ ಹಾಗು ವೇಳೆಯಲ್ಲಿ ಪಡಿತರ ವಿತರಿಸುತ್ತಿಲ್ಲ. ಇದರಿಂದಾಗಿ ನಾಗರೀಕರು ಪಡಿತರ ಪಡೆಯಲು ತೊಂದರೆ ಅನುಭವಿಸುವಂತಾಗಿದೆ. ವಿತರಕರು ನಿಗದಿಪಡಿಸುವ ದಿನಾಂಕ ಹಾಗು ವೇಳೆ ಎದುರು ನೋಡುವಂತೆ ಮತ್ತು ದಿನವಿಡೀ ಸರದಿ ಸಾಲಿನಲ್ಲಿ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಯಿತು.

ಪಕ್ಷದ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ತಾಲೂಕು ಸಂಚಾಲಕ ಅಬ್ದುಲ್ ಖದೀರ್ ಮತ್ತು ಜಿಲ್ಲಾ ಮುಖಂಡ ಡಿ.ಎಸ್ ಪರಮೇಶ್ವರಚಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















