ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಹಿಜಾಬ್ ವಿವಾದದ ಮೂಲಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿ ಮಾಡಿ ನಾವು ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ಕಸಿದುಕೊಳ್ಳುತ್ತಿದ್ದೇವೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.
By letting students’ hijab come in the way of their education, we are robbing the future of the daughters of India.
Ma Saraswati gives knowledge to all. She doesn’t differentiate. #SaraswatiPuja
— Rahul Gandhi (@RahulGandhi) February 5, 2022
ಉಡುಪಿಯಲ್ಲಿ ನಡೆಯುತ್ತಿರುವ ಹಿಜಾಬ್ ಗಲಭೆ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ಮಾ ಸರಸ್ವತಿಯು ಎಲ್ಲರಿಗೂ ಜ್ಞಾನವನ್ನು ನೀಡುತ್ತಾಳೆ. ಅವಳು ಭೇದಿಸುವುದಿಲ್ಲ ಎಂದು ಹೇಳಿದ್ದಾರೆ.
ಹಿಜಾಬ್ ವಿವಾದ ಈಗ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಈ ಬಗ್ಗೆ ಪ್ರಮುಖ ರಾಜಕೀಯ ಮುಖಂಡರು ಪರ-ವಿರೋಧ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ವಿವಾದದ ಕಿಚ್ಚು ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಕುಂದಾಪುರದ ಕಾಲೇಜುಗಳಲ್ಲಿ ಇಂದು ರಜೆ ಘೋಷಿಸಲಾಗಿದೆ. ಹಿಜಾಬ್ ಗೆ ಪ್ರತಿಯಾಗಿ ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳು ಮೆರವಣಿಗೆ ಸಾಗುತ್ತಿದ್ದು, ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ಮತ್ತು ಧರಣಿ ನಡೆಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post