ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಎಟಿಎನ್‌ಸಿಸಿ ಕಾಲೇಜು ವಿದ್ಯಾರ್ಥಿಗಳು ಇಂದು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಪ್ರವೇಶ ನಿರಾಕರಿಸಿದ ಹಿನ್ನೆಲೆ ಪ್ರಾಂಶುಪಾಲರು ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದು, ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಹಿಜಾಬ್ ಧರಿಸಿದವರಿಗೆ ತರಗತಿ ಪ್ರವೇಶಕ್ಕೆ ಅವಕಾಶ ನೀಡುವುದಾದರೆ ನಮಗೂ ಕೇಸರಿ ಶಾಲು ಧರಿಸಿ ತರಗತಿಗೆ ಹಾಜರಾಗಲು ಅವಕಾಶ ನೀಡುವಂತೆ ವಿದ್ಯಾರ್ಥಿಗಳು ಆಗ್ರಹಿಸಿ, ಧರಣಿ ನಡೆಸಿದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲರು ಮಾತನಾಡಿ, ನಾಳೆಯಿಂದ ಆಡಳಿತ ಮಂಡಳಿ ನಿಗದಿಪಡಿಸಿರುವ ಸಮವಸ್ತ್ರವನ್ನು ಮಾತ್ರ ಧರಿಸಿ ಕಾಲೇಜಿಗೆ ಬರಬೇಕು. ಸಮವಸ್ತ್ರ ನಿಯಮವನ್ನು ಪಾಲಿಸದ ವಿದ್ಯಾರ್ಥಿಗಳನ್ನು ತರಗತಿಯಿಂದ ಹೊರ ಕಳುಹಿಸುವುದಾಗಿ ಹೇಳಿದ ನಂತರ ವಿದ್ಯಾರ್ಥಿಳು ಪ್ರತಿಭಟನೆ ಅಂತ್ಯಗೊಳಿಸಿದರು.
ಬಾಳೆಬೈಲು ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ:
ತೀರ್ಥಹಳ್ಳಿ: ಪಟ್ಟಣದ ಬಾಳೆಬೈಲು ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳು ಇಂದು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದು ಅವರನ್ನು ಕಾಲೇಜು ಆವರಣದಲ್ಲಿಯೇ ತಡೆದು ತರಗತಿಗಳಿಗೆ ಪ್ರವೇಶ ನಿರಾಕರಿಸಲಾಯಿತು.
ಶಾಲಾ-ಕಾಲೇಜು ಆಡಳಿತ ಮಂಡಳಿಗಳು ನಿರ್ಧರಿಸಿರುವ ಸಮವಸ್ತ್ರವನ್ನೇ ಕಡ್ಡಾಯವಾಗಿ ಧರಸಬೇಕೆಂದು ಆದೇಶ ಹೊರಡಿಸಿದ್ದರೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಪ್ರವೇಶ ನಿರಾಕರಿಸಿದ ಹಿನ್ನೆಲೆ ಹಿಜಾಬ್ ಧರಿಸಿದವರಿಗೆ ಒಳಗೆ ಕೂಡಲು ಅನುಮತಿ ನೀಡುತ್ತೀರಿ ನಮಗೆ ಏಕೆ ಬಿಡುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿಜಬ್ ಹಾಕಿಕೊಂಡು ತರಗತಿ ಪ್ರವೇಶಿಸುತ್ತಿರುವವರನ್ನು ಇದೇ ರೀತಿಯಲ್ಲಿ ತಡೆಯಬೇಕು ಎಲ್ಲರಿಗೂ ಒಂದೇ ನಿಯಮ ಪಾಲನೆಯಾಗಬೇಕು. ಸಮವಸ್ತ್ರ ಕಡ್ಡಾಯ ಮಾಡಿದರೆ ನಾವು ಒಪ್ಪುತ್ತೇವೆ. ಇಲ್ಲವಾದರೆ ನಾವು ಕೇಸರಿ ಶಾಲು ಹಾಕಿಕೊಂಡು ತರಗತಿಯಲ್ಲಿ ಕೂರುತ್ತೇವೆ ಎಂದು ಪ್ರತಿಭಟಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post