ಕಲ್ಪ ಮೀಡಿಯಾ ಹೌಸ್ | ಉಡುಪಿ |
ಹಿಜಾಬ್-ಕೇಸರಿ ಶಾಲು ವಿವಾದ ತಾರಕಕ್ಕೇರುವ ಹಿನ್ನೆಲೆಯಲ್ಲಿ ನಗರದ ಪ್ರತಿಷ್ಠಿತ ಎಂಜಿಎಂ ಕಾಲೇಜಿಗೆ ಅನಿರ್ಧಿಷ್ಟಾವಧಿಗೆ ರಜೆ ಘೋಷಿಸಲಾಗಿದೆ.
ಆಡಳಿತ ಮಂಡಳಿಯ ಆದೇಶವನ್ನು ಉಲ್ಲಂಘಿಸಿ ಹಿಜಾಬ್ ಧರಿಸಿ ಕಾಲೇಜಿಗೆ ವಿದ್ಯಾರ್ಥಿನಿಯರು ಯತ್ನಿಸಿದ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಕೇಸರಿ ಶಾಲು ಹಾಗೂ ಪೇಟ ಧರಿಸಿ ಆಗಮಿಸಿದರು. ಈ ವೇಳೆ ಎರಡೂ ತಂಡಗಳ ನಡುವೆ ನೇರಾನೇರ ವಾಗ್ವಾದ ನಡೆಯಿತು.
ಪರಿಸ್ಥಿತಿಯನ್ನು ಅವಲೋಕಿಸಿದ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಕಾಲೇಜಿಗೆ ಅನಿರ್ಧಿಷ್ಟಾವಧಿಗೆ ರಜೆ ಘೋಷಿಸಿದ್ದು, ವಿದ್ಯಾರ್ಥಿಗಳಿಗೆ ಮನೆಗಳಿಗೆ ತೆರಳುವಂತೆ ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post