ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಾಪುಜಿ ನಗರ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರದಲ್ಲಿ ಇಂದು ಮುಂಜಾನೆ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ನಗರದಾದ್ಯಂತ ಫೆ.8ರ ಇಂದು ಹಾಗೂ 9ರ ನಾಳೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ನಾಗರಾಜ್ ಆದೇಶಿಸಿದ್ದಾರೆ.
ಬಾಪೂಜಿ ನಗರ ಸರ್ಕಾರಿ ಕಾಲೇಜಿನಲ್ಲಿ ಇಂದು ಮುಂಜಾನೆ ಏಕಾಏಕಿ ನಡೆದ ಕಲ್ಲುತೂರಾಟದಲ್ಲಿ ಹಲವು ಯುವಕರು ಗಾಯಗೊಂಡಿದ್ದು, ಈ ವಿಚಾರ ನಗರದಾದ್ಯಂತ ಹರಡಿತು. ಅಲ್ಲದೆ ಬಿಹೆಚ್ ರಸ್ತೆಯಲ್ಲಿ ಎರಡು ಕೋಮುಗಳ ಯುವಕರು ಅವಿರೋಧ ಘೋಷಣೆ ಕೂಗಿ ಮೆರವಣಿಗೆ ನಡೆಸಿದರು. ವಿವಾದ ತಾರಕಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಅಲ್ಲದೆ ಹಲವು ಬಡಾವಣೆಗಳಲ್ಲಿ ಯುವಕರು ಗುಂಪು ಕಟ್ಟಿಕೊಂಡು ಮಾತನಾಡುತ್ತಿದ್ದು, ಹಾಗೂ ತೆರಳುತ್ತಿದ್ದು ಇದನ್ನು ಪೊಲೀಸರು ಚದುರಿಸಿದ್ದಾರೆ. ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ನಗರದ ಪ್ರಮುಖ ಪ್ರದೇಶಗಳಲ್ಲಿ ಅಂಗಡಿಮುಂಗಟ್ಟುಗಳನ್ನು ಮಾಲೀಕರು ಸ್ವಯಂಪ್ರೇರಿತರಾಗಿ ಮುಚ್ಚಿದರೆ, ಇನ್ನು ಕೆಲವು ಕಡೆ ಪೊಲೀಸರೇ ಬಂದ್ ಮಾಡಿಸಿದ್ದಾರೆ ಎಂದು ವರದಿಯಾಗಿದೆ.
ಘಟನೆ ಹಿನ್ನೆಲೆಯಲ್ಲಿ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post