ಕಲ್ಪ ಮೀಡಿಯಾ ಹೌಸ್ | ಬಂಟ್ವಾಳ |
ಬಂಟ್ವಾಳ ಬಿಸಿರೋಡ್‌ನ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದ ಮುಂಭಾಗದಲ್ಲಿ ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.

ಮಂಗಳೂರು ಕಡೆಯಿಂದ ವೇಗವಾಗಿ ಬಂದ ಅಪರಿಚಿತ ಬೈಕೊಂದು ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ನಂತರ ಬೈಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















