ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಿಜಾಬ್-ಕೇಸರಿ ಶಾಲು ವಿವಾದ ನಿನ್ನೆ ನಗರದಲ್ಲಿ ಸಂಘರ್ಷದ ಹಾದಿ ತುಳಿದು, ಕಲ್ಲು ತೂರಾಟ ನಡೆಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಇಂದು ಪೊಲೀಸ್ ರೂಟ್ ಮಾರ್ಚ್ ನಡೆಸಲಾಯಿತು.
ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ಬೆಳಗ್ಗೆ ಪೊಲೀಸ್ ಇಲಾಖಾ ವತಿಯಿಂದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು, ಡಿಎಆರ್ ತುಕಡಿ, ಕೆಎಸ್’ಆರ್’ಪಿ ತುಕಡಿಯೊಂದಿಗೆ ರೂಟ್ ಮಾರ್ಚ್ ನಡೆಸಲಾಯಿತು.
ಸೈನ್ಸ್ ಮೈದಾನದಿಂದ ಪ್ರಾರಂಭವಾದ ರೂಟ್ ಮಾರ್ಚ್ ಕರ್ನಾಟಕ ಸಂಘ, ಎಎ ಸರ್ಕಲ್, ಬಿಎಚ್ ರಸ್ತೆ ಅಶೋಕ ಸರ್ಕಲ್ ಮುಖಾಂತರ ಡಿಎಆರ್ ಪೊಲೀಸ್ ಮೈದಾನದಲ್ಲಿ ಮುಕ್ತಾಯವಾಯಿತು.
ಈ ಮೂಲಕ ಕಿಡಿಗೇಡಿಗಳಿಗೆ ಎಚ್ಚರಿಸುವ ಹಾಗೂ ನಾಗರಿಕರಲ್ಲಿ ಆತ್ಮವಿಶ್ವಾಸ ತುಂಬುವ ಕಾರ್ಯ ನಡೆಸಿತು. ಹಿರಿಯ ಅಧಿಕಾರಿಗಳು ಸೇರಿದಂತೆ ನೂರಾರು ಪೊಲೀಸ್ ಸಿಬ್ಬಂದಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post