ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಾದ್ಯಂತ ತತಕ್ಷಣದಿಂದ ಜಾರಿಗೆ ಬರುವಂತೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಚೇರಿ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ಇನ್ನು ಮುಂದೆ ಮುಂಜಾನೆ 9 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ವಿಸ್ತರಣೆ ಮಾಡಲಾಗಿದೆ.ಈ ಕುರಿತಂತೆ ನೋಂದಣಿ ಉಪಮಹಾಪರಿವೀಕ್ಷಕರು ಆದೇಶ ಹೊರಡಿಸಿದ್ದು, ನೋಂದಣಿ ಮತ್ತು ಮುದ್ರಾಂಕ ಇಲಾಖೆ ವ್ಯಾಪ್ತಿಯಲ್ಲಿನ ನೋಂದಣಿ ಕಚೇರಿಗಳು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ಕಾರ್ಯ ನಿರ್ವಹಿಸುತ್ತಿದೆ. ಕರ್ನಾಟಕ ನೋಂದಣಿ ನಿಯಮಗಳು 1964ರ ನಿಯಮ 4(ii)ರ ಉಪಬಂಧದ ವಿವರಣೆಯಂತೆ ಸದರಿ ಕಚೇರಿಗಳಲ್ಲಿನ ಜನ ಸಂದಣಿಯನ್ನು ಪರಿಗಣಿಸಿ ಸಾರ್ವಜನಿಕರ ಹಿತದೃಷ್ಠಿಯಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ವ್ಯಾಪ್ತಿಯ ಉಪನೋಂದಣಿ ಕಚೇರಿಗಳ ಕೆಲಸದ ವೇಳೆಯನ್ನು ಮುಂದಿನ ಆದೇಶದವರೆಗೆ ಬೆಳಗ್ಗೆ 9 ಗಂಟೆಯಿಂದ ರಾತ್ರಿ 7 ಗಂಟೆಯವರೆಗೂ ತತಕ್ಷಣದಿಂದ ಜಾರಿಗೆ ಬರುವಂತೆ ವಿಸ್ತರಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post