ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ |
ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಕಲಗಾರ ಗ್ರಾಮದಲ್ಲಿ ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು ಎರಡು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಶಿವ ಮತ್ತು ಭಾನುಮತ್ ಅವರ ಪುತ್ರಿ ತೇಜಸ್ವಿ ( 2) ಮೃತ ಬಾಲಕಿಯಾಗಿದ್ದು, ಈಕೆ ತನ್ನ ಹುಟ್ಟುಹಬ್ಬದ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದಳು. ಆಕೆಯ ಪೋಷಕರು ಅತಿಥಿಗಳನ್ನು ಭೇಟಿ ಮಾಡಲು ಮತ್ತು ಊಟ ಬಡಿಸಲು ಹೋದಾಗ, ಬಾಲಕಿ ಅಡುಗೆ ಮನೆಗೆ ಹೋಗಿ ಕುರ್ಚಿ ಮೇಲೆ ಹತ್ತಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಿಸಿ ಸಾಂಬಾರ್ ತುಂಬಿದ ಪಾತ್ರೆಯಲ್ಲಿ ಬಿದ್ದಿದ್ದಾಳೆ. ತಕ್ಷಣ ಬಾಲಕಿಯನ್ನು ಪೋಷಕರು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಆಕೆಯನ್ನು ವಿಜಯವಾಡಕ್ಕೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತೇಜಸ್ವಿ ಸಾವನ್ನಪ್ಪಿದ್ದಾಳೆ.
ಫೆ. 13ರಂದು ಈ ಘಟನೆ ನಡೆದಿದ್ದು, ಈ ಸಂಬಂಧ ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post