ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಾಳೆಯಿಂದ ಕಾಲೇಜು ತರಗತಿಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಜಾರಿಗೆ ಬರುವಂತೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಈ ಕುರಿತಂತೆ ತಾಲೂಕು ದಂಡಾಧಿಕಾರಿ ಎನ್.ಜೆ. ನಾಗರಾಜ್ ಅವರು ಆದೇಶ ಹೊರಡಿಸಿದ್ದು, ಫೆ.16ರ ಮುಂಜಾನೆ 6 ಗಂಟೆಯಿಂದ ಫೆ.19ರ ರಾತ್ರಿ 9 ಗಂಟೆಯವರೆಗೂ ನಗರ ವ್ಯಾಪ್ತಿಯಲ್ಲಿ ಭಾರತೀಯ ದಂಡ ಸಂಹಿತೆಯ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.ಯಾವುದಕ್ಕೆ ಅವಕಾಶ? ಯಾವುದಕ್ಕೆ ನಿರ್ಬಂಧ?
- ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಜಾತಿ-ಧರ್ಮ ಸೂಚಕದ ವಸ್ತ್ರಗಳನ್ನು ಧರಿಸುವಂತಿಲ್ಲ
- ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಸಮಿತಿ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಬೇರೆ ಯಾವುದೇ ಸಂಘ, ಸಂಘಟಿಸುವುದು ನಿಷೇಧ
- ಶಿಕ್ಷಣ ಸಂಸ್ಥೆಗಳಲ್ಲಿ ಕೇಸರಿ ಶಾಲು, ಹಿಜಾಬ್ ಸೇರಿ ಯಾವುದೇ ಧಾರ್ಮಿ ವಿಷಯಗಳ ಕುರಿತು ಚರ್ಚೆ ನಡೆಸುವಂತಿಲ್ಲ
- ನಗರ ವ್ಯಾಪ್ತಿಯಲ್ಲಿ ಐದಕ್ಕಿಂತಲೂ ಹೆಚ್ಚು ಜನರು ಗುಂಪು ಸೇರುವಂತಿಲ್ಲ
- ಯಾವುದೇ ಮೆರವಣಿಗೆ, ಸಭೆ, ಸಮಾರಂಭ, ವಿಜಯೋತ್ಸವ ಹಾಗೂ ಸಾರ್ವಜನಿಕ ಸಮಾವೇಶಕ್ಕೆ ನಿಷೇಧ
- ಶಸ್ತ್ರ, ದೊಣ್ಣೆ, ಕತ್ತಿ ಸೇರಿದಂತೆ ಯಾವುದೇ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದು ನಿಷೇಧ
- ಯಾವುದೇ ವ್ಯಕ್ತಿಗಳ, ಶವಗಳ ಪ್ರತಿಕೃತಿ ಪ್ರದರ್ಶನ, ಪ್ರಚೋದನಾತ್ಮಕ ಘೋಷಣೆ ಕೂಗುವುದು, ಹಾಡು-ಸಂಗೀತ ನುಡಿಸುವುದು, ಭಿತ್ತಿ ಪತ್ರ ಪ್ರದರ್ಶನ ನಿಷೇಧ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post