ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು, ಇದಕ್ಕಾಗಿ ಪೊಲೀಸ್ ಇಲಾಖೆ ಎಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
Also Read: ಹಳೇ ಶಿವಮೊಗ್ಗದ ಕೆಲವು ಭಾಗ ಪ್ರಕ್ಷುಬ್ದ: ಪರಿಸ್ಥಿತಿ ನಿಯಂತ್ರಣಕ್ಕೆ ಖುದ್ದು ಫೀಲ್ಡಿಗಿಳಿದ ಎಸ್’ಪ
ಘಟನಾ ಸ್ಥಳ ಹಾಗೂ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಹತ್ಯೆಗೀಡಾದ ಹರ್ಷನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಂತರ ಅವರು ಮಾತನಾಡಿದರು.
ಆರೋಪಿಗಳ ಪತ್ತೆಯಾಗಿ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು. ಇಂತಹ ಘಟನೆಗೆ ಕಾರಣರಾದವರನ್ನು ಬಂಧಿಸಿ, ಕಾನೂನಾತ್ಮಕವಾಗಿ ಕ್ರಮ ಕೈಗೊಂಡು, ಹರ್ಷನ ಸಾವಿಗೆ ನ್ಯಾಯ ಒದಗಿಸಲಾಗುವುದು ಎಂದರು.
Also Read: ಶಿವಮೊಗ್ಗ-ಮನೆಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ: ಪರಿಸ್ಥಿತಿ ನಿಯಂತ್ರಣದಲ್ಲಿ, ನಗರಕ್ಕೆ ಐಜಿ ಭೇಟಿ
ಇನ್ನು, ಘಟನೆ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಶಿವಮೊಗ್ಗದ ಕೆಲವು ಪ್ರದೇಶಗಳಲ್ಲಿ ಅಹಿತಕರ ಘಟನೆ ನಡೆದಿದ್ದು, ಇಂತಹ ಪರಿಸ್ಥಿತಿಗೆ ಅವಕಾಶ ಮಾಡಿಕೊಡಬಾರದು. ಶಿವಮೊಗ್ಗ ಜನತೆಯಲ್ಲಿ ಕೈಮುಗಿದು ಕೇಳಿಕೊಳ್ಳುತ್ತೇನೆ, ಯಾವುದೇ ರೀತಿಯ ಅಹಿತಕರ ಘಟನೆಗೆ ಅವಕಾಶ ಮಾಡಿಕೊಡಬೇಡಿ. ನಗರದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಿ ಎಂದು ಮನವಿ ಮಾಡಿದರು.
ಮೃತ ಹರ್ಷನ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಗೃಹ ಸಚಿವರು, ಈ ಸಾವಿಗೆ ನ್ಯಾಯ ಒದಗಿಸುತ್ತೇವೆ. ನಿಮ್ಮ ಕುಟುಂಬದೊಂದಿಗೆ ನಮ್ಮ ಸರ್ಕಾರವಿದೆ. ಯಾವುದೇ ಕಾರಣಕ್ಕೂ ಧೈರ್ಯಗೆಡಬೇಡಿ ಎಂದು ಆತ್ಮಸ್ಥೈರ್ಯ ತುಂಬಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post