ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಚಿವ ಕೆ.ಎಸ್. ಈಶ್ವರಪ್ಪ #Minister Eshwarappa ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸಿ ಕಾಂಗ್ರೆಸ್ ಸದನದಲ್ಲಿ ಗದ್ದಲ ನಡೆಸಿದ ಬೆನ್ನಲ್ಲೇ ಯಾವುದೇ ಚರ್ಚೆಯೇ ಇಲ್ಲದೇ ನಾಲ್ಕು ವಿಧೇಯಕಗಳನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
Also Read: ಮಾರ್ಚ್ 4ರವರೆಗೂ ವಿಧಾನಸಭೆ ಕಲಾಪ ಮುಂದೂಡಿಕೆ
ಯಾವೆಲ್ಲಾ ಮಸೂದೆ ಅಂಗೀಕಾರ?
- ಕ್ರಿಮಿನಲ್ ಕಾನೂನು ತಿದ್ದುಪಡಿ ಸುಗ್ರೀವಾಜ್ಞೆ, 1944, (ಕರ್ನಾಟಕ ತಿದ್ದುಪಡಿ ಮಸೂದೆ, 2022)
- ಕರ್ನಾಟಕ ಸ್ಟಾಂಪ್ (ತಿದ್ದುಪಡಿ) ಮಸೂದೆ, 2022
- ಕರ್ನಾಟಕ ಸ್ಟ್ಯಾಂಪ್ (ಎರಡನೇ ತಿದ್ದುಪಡಿ) ಮಸೂದೆ, 2022
- ಕರ್ನಾಟಕ ಸಿವಿಲ್ ಸರ್ವಿಸಸ್ (2011 ರ ಬ್ಯಾಚ್ ಗೆಜೆಟೆಡ್ ಪ್ರೊಬೇಷನರ್’ಗಳ ಆಯ್ಕೆ ಮತ್ತು ನೇಮಕಾತಿ) ಮಸೂದೆ, 2022

ಆರ್ಥಿಕ ಅಪರಾಧಗಳ ವಿಚಾರಣೆ ನಡೆಸುವ ಅಧಿಕಾರ ಜಿಲ್ಲಾ ನ್ಯಾಯಾಧೀಶರಿಗೆ ಇತ್ತು. ಈಗ ಆ ಅಧಿಕಾರ ವಿಸ್ತರಣೆ ಮಾಡಲಾಗುತ್ತಿದ್ದು, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಿಗೆ ಹಾಗೂ ವಿಚಾರಣಾ ನ್ಯಾಯಾಲಯಗಳಿಗೆ ಸಹ ಅಧಿಕಾರ ನೀಡಲಾಗುತ್ತಿದೆ. ಜತೆಗೆ, ಅಕ್ರಮ ಹಣ ವರ್ಗಾವಣೆಯ ತನಿಖೆಯಲ್ಲಿ ರಾಜ್ಯ ಸರ್ಕಾರ ಪಾತ್ರ ಹೊಂದಿಲ್ಲ. ಆರೋಪಿಗಳ ಆಸ್ತಿ ಜಪ್ತಿ ಮಾಡುವುದಕ್ಕೆ ಜಾರಿ ನಿರ್ದೇಶನಾಲಯ ಮಾತ್ರ ಅಧಿಕೃತ ಏಜೆನ್ಸಿ. ಇದೀಗ, ರಾಜ್ಯ ಸರ್ಕಾರಕ್ಕೂ ಅಧಿಕಾರ ಸಿಗಲಿದೆ.

2022ನೆಯ ಸಾಲಿನ ಕರ್ನಾಟಕ ಸಿವಿಲ್ ಸೇವೆಗಳ (2011 ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಆಯ್ಕೆ ಮತ್ತು ನೇಮಕಾತಿಯ ಸಿಂಧುಗೊಳಿಸುವಿಕೆ) ವಿಧೇಯಕ ಕೂಡ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ.
Also Read: ಶಿವಮೊಗ್ಗ : ಕರ್ಫ್ಯೂ ಜಾರಿಯಲ್ಲಿದ್ದರು 2 ಆಟೋ, ಒಂದು ದ್ವಿಚಕ್ರ ವಾಹನಕ್ಕೆ ಬೆಂಕಿ
2011 ನೆಯ ಸಾಲಿನ 362 ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೇಮಕಾತಿ ಆದೇಶ ನೀಡಿರುವುದನ್ನು ಸಿಂಧುಗೊಳಿಸುವುದು ಮತ್ತು ಆಯ್ಕೆ ಪಟ್ಟಿಯನ್ನು ಕಾನೂನು ಬದ್ಧಗೊಳಿಸುವ ಉದ್ದೇಶದಿಂದ 2022ನೆಯ ಸಾಲಿನ ಕರ್ನಾಟಕ ಸಿವಿಲ್ ಸೇವೆಗಳ (2011ನೆಯ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಆಯ್ಕೆ ಮತ್ತು ನೇಮಕಾತಿಯ ಸಿಂಧುಗೊಳಿಸುವಿಕೆ) ವಿಧೇಯಕಕ್ಕೆ ಅಂಗೀಕಾರ ದೊರೆತಿದೆ. ರಾಜ್ಯ ಸರ್ಕಾರದ ಈ ಮಹತ್ವದ ನಿರ್ಧಾರದಿಂದಾಗಿ ಕೆಪಿಎಸ್’ಪಿ ಮೂಲಕ ನೇಮಕಗೊಂಡಿದ್ದ 362 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಶೀಘ್ರವೇ ಕೈ ಸೇರಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post