ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಧರ್ಮಸ್ಥಳದಲ್ಲಿ ನಡೆದಿರುವ ದಲಿತ ಯುವಕ ದಿನೇಶ್ ಅವರ ಹತ್ಯೆ ಅತ್ಯಂತ ಖಂಡನೀಯ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ #Siddaramaiah ಹೇಳಿದ್ದಾರೆ.
ಧರ್ಮಸ್ಥಳದಲ್ಲಿ ನಡೆದಿರುವ
ದಲಿತ ಯುವಕ ದಿನೇಶ್ ಅವರ ಹತ್ಯೆ ಅತ್ಯಂತ ಖಂಡನೀಯ.ಕೊಲೆ ಆರೋಪಿ ಬಜರಂಗ ದಳದ ನಾಯಕನಾಗಿರುವ ಕಾರಣಕ್ಕೆ ಮೃತನ ಕುಟುಂಬ ಆತಂಕಕ್ಕೀಡಾಗಿದೆ.
ಪೊಲೀಸರು ರಾಜಕೀಯ ಪ್ರಭಾವಕ್ಕೆ ಮಣಿಯದೆ
ಕೊಲೆ ಆರೋಪಿಯನ್ನು ತಕ್ಷಣ ಬಂಧಿಸಬೇಕು ಮತ್ತು ಮೃತ ಯುವಕನ ಕುಟುಂಬಕ್ಕೆ ರಕ್ಷಣೆ ನೀಡಬೇಕು.
1/2— Siddaramaiah (@siddaramaiah) February 25, 2022
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊಲೆ ಆರೋಪಿ ಭಜರಂಗದಳದ #Bajarangadala ನಾಯಕನಾಗಿರುವ ಕಾರಣಕ್ಕೆ ಮೃತನ ಕುಟುಂಬ ಆತಂಕಕ್ಕೀಡಾಗಿದೆ. ಪೊಲೀಸರು ರಾಜಕೀಯ ಪ್ರಭಾವಕ್ಕೆ ಮಣಿಯದೆ ಕೊಲೆ ಆರೋಪಿಯನ್ನು ತಕ್ಷಣ ಬಂಧಿಸಬೇಕು ಮತ್ತು ಮೃತ ಯುವಕನ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಹಿಂದುಗಳ ರಕ್ಷಣೆಯ ಮಂತ್ರ ಜಪಿಸುತ್ತಿರುವ ಬಿಜೆಪಿಯವರು #BJP ಧರ್ಮಸ್ಥಳದ ದಲಿತ ಯುವಕನ ಹತ್ಯೆಕೋರನ ರಕ್ಷಣೆಗೆ ನಿಂತಿರುವುದು ಆತ್ಮವಂಚನೆಯ ನಡವಳಿಕೆ. ಅವರು ಸಾವಿನ ರಾಜಕೀಯ ಮಾಡಲು ಹೋಗದೆ ಮೃತ ಯುವಕನ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post