ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಶ್ವ ಮಹಿಳಾ ದಿನಾಚರಣೆ World Women’s Day ಅಂಗವಾಗಿ ಇಂದು ಶಿವಮೊಗ್ಗ ನಗರದಲ್ಲಿ ಮಾಜಿ ಶಾಸಕ ಕೆ. ಬಿ. ಪ್ರಸನ್ನ ಕುಮಾರ್ Former MLA K.B. Prasanna Kumar ನೇತೃತ್ವದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಪೌರ ಕಾರ್ಮಿಕರಿಗೆ ಮತ್ತು ಬೀದಿ ಬದಿ ವ್ಯಾಪಾರ ನಡೆಸುತ್ತ ತಮ್ಮ ಜೀವನ ಕಟ್ಟಿಕೊಂಡಿರುವ ಶ್ರಮಿಕ ಮಹಿಳೆಯರಿಗೆ ಶಾಲು ಹೊದಿಸಿ ಸನ್ಮಾನಿಸಿ ಸೀರೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಕುಮಾರಿ, ಮಹಿಳಾ ಮುಖಂಡರುಗಳಾದ ಸುವರ್ಣ ನಾಗರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್, ಪಾಲಿಕೆ ಸದಸ್ಯ ಯೋಗೀಶ್, ನಗರಪಾಲಿಕೆ ಮಾಜಿ ಸದಸ್ಯರಾದ ದೀಪಕ್ ಸಿಂಗ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















