ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಉಕ್ರೇನ್ ನಲ್ಲಿ Ukraine ಮೃತಪಟ್ಟ ಕನ್ನಡಿಗ ನವೀನ್ Naveen ಅವರ ನಿವಾಸಕ್ಕೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ Siddaramaiah ಅವರು ಇಂದು ಭೇಟಿ ನೀಡಿದರು.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನಿವಾಸದಲ್ಲಿ ಸಿದ್ದರಾಮಯ್ಯ ಅವರು ನವೀನ್ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಇದೇ ವೇಳೆ ನವೀನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
Also read: ಕುವೆಂಪು ವಿವಿ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ: ಎಷ್ಟು ಏರಿಕೆಯಾಗಿದೆ?
ವಿಧಾನಸಭೆ ಮಾಜಿ ಸ್ಪೀಕರ್ ಕೋಳಿವಾಡ, ಮಾಜಿ ಸಚಿವರಾದ ರುದ್ರಪ್ಪ ಲಮಾಣಿ, ಜಯಮಾಲಾ, ಬ್ಯಾಡಗಿ ಶಿವಣ್ಣ, ಮುಖಂಡರಾದ ಬನ್ನಿಕೋಡ್, ಪ್ರಕಾಶ ಕೋಳಿವಾಡ, ಸೋಮಣ್ಣ ಬೇವಿನಮರದ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ. ಹಿರೇಮಠ ಹಾಜರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post