ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕಿನ ರಬ್ಬರ್ ಕಾಡು ಗ್ರಾಮದ ಮನೆಯೊಂದರ ಬೀಗ ಮುರಿದು ಕಳ್ಳತನ ಮಾಡಿರುವ ಪ್ರಕರಣದ ಮೇರೆಗೆ ಓರ್ವನನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನ ಮತ್ತು ನಗದನ್ನು ವಶಪಡಿಸಿಕೊಂಡಿದ್ದಾರೆ.
ಜ.13ರಂದು ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ರಬ್ಬರ್ ಕಾಡು ಗ್ರಾಮದ ಮನೆಯೊಂದರ ಹಿಂಬಾಗಿಲ ಬೀಗ ಮುರಿದು 6ಲಕ್ಷ ರೂ. ನಗದು ಮತ್ತು ಸುಮಾರು 5,66,000ರೂ. ಮೌಲ್ಯದ ಚಿನ್ನವನ್ನು ಕಳವು ಮಾಡಲಾಗಿತ್ತು.
ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪಿ.ಐ. ಪೇಪರ್ ಟೌನ್ ಪೊಲೀಸ್ ಠಾಣೆ, ಪಿಎಸ್‌ಐ ಹಾಗೂ ಸಿಬ್ಬಂದಿಗಳ ತಂಡವು ಸದರಿ ಪ್ರಕರಣದ ತನಿಖೆ ಕೈಗೊಂಡು ಆರೋಪಿ ಚೇತನ್ (27)ನನ್ನು ಬಂಧಿಸಿ, ಆರೋಪಿಯಿಂದ 5,60,000ರೂ. ನಗದು ಹಣ ಹಾಗೂ 6,43,000ರೂ. ಅಂದಾಜು ಮೌಲ್ಯದ ಒಟ್ಟು 134.44 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















