ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಿಜಾಬ್ Hijab ಕುರಿತಾಗಿ ರಾಜ್ಯ ಹೈಕೋರ್ಟ್ High Court ಅಂತಿಮ ತೀರ್ಪು ನೀಡಿರುವ ಬೆನ್ನಲ್ಲೇ ಕೆಲವು ವಿದ್ಯಾರ್ಥಿನಿಯರು ಇದನ್ನು ಧಿಕ್ಕರಿಸಿರುವ ಘಟನೆ ನಡೆದಿದೆ.
ನಗರದ ಖಾಸಗಿ ಕಾಲೇಜೊಂದರಲ್ಲಿ ಸುಮಾರು 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಆಗಮಿಸಿದ್ದರು. ಆದರೆ, ಇವರಿಗೆ ಅವಕಾಶ ನೀಡದ ಕಾರಣ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿನಿಯರು, ನಮಗೆ ಹಿಜಾಬ್ ಮುಖ್ಯ ಅದು ನಮ್ಮ ಹಕ್ಕು. ಇದಕ್ಕೆ ಅವಕಾಶ ನೀಡುವುದಿಲ್ಲ ಎಂದರೆ ನಮಗೆ ಶಿಕ್ಷಣವೇ ಬೇಡ ಎಂದು ಇಂಟರನಲ್ ಪರೀಕ್ಷೆಯನ್ನು ಧಿಕ್ಕರಿಸಿ ಹೊರನಡೆದಿದ್ದಾರೆ.
Also read: ಜಾವಳ್ಳಿ ಬಳಿ ಟ್ಯಾಂಕರ್ ಪಲ್ಟಿ: ಪೆಟ್ರೋಲ್ ತುಂಬಿಸಿಕೊಳ್ಳಲು ಮುಗಿಬಿದ್ದ ಜನ
ಈ ವೇಳೆ ಮಾಧ್ಯಮಗಳ ಮುಂದೆ ಆಕ್ರೋಶ ವ್ಯಕ್ತಪಡಿಸಿದ ಈ ವಿದ್ಯಾರ್ಥಿನಿಯರು ಹಿಜಾಬ್ ಇಸ್ಲಾಂ ಧಾರ್ಮಿಕ ಆಚರಣೆಯ ಅವಿಭಾಜ್ಯ ಅಂಗ ಅಲ್ಲ ಎಂದು ನ್ಯಾಯಾಲಯ ಹೇಳಿದೆ. ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಹೌದೇ ಅಲ್ಲವೇ ಎಂಬುದು ಖುರಾನ್ ಓದಿರುವ ನಮಗೆ ತಿಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post