ಕಲ್ಪ ಮೀಡಿಯಾ ಹೌಸ್ | ಸಾಗರ |
ತಾಲೂಕಿನ ಕುಗ್ವೆ ಬಳಿಯಲ್ಲಿ ಇಂದು ಸಂಜೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಕುಗ್ಬೆ ಬಳಿಯ ತಿರುವಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ತಲವಾಟ ಗ್ರಾಮದ ಇಡುವಾಣಿ ವಾಸಿ ಅನಿಲ್ ಎಂಬಾತ ಮೃತಪಟ್ಟಿದ್ದು, ಈತನ ತಂದೆ ಈಶ್ವರ ಎನ್ನುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















