ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಿಜಾಬ್ ಕುರಿತಾಗಿ ಅಂತಿಮ ತೀರ್ಪು ನೀಡಿದ ರಾಜ್ಯ ಹೈಕೋರ್ಟ್‌ನ ನ್ಯಾಯಾಧೀಶರುಗಳಿಗೆ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಠಾಣೆಯಲ್ಲಿ ಎಫ್’ಐಆರ್ ದಾಖಲಾಗಿದೆ.
ವಕೀಲರಾದ ಸುಧಾ ಎನ್ನುವವರು ದೂರಿನ ಆಧಾರದಲ್ಲಿ ತಮಿಳುನಾಡು ಮೂಲದ ಅಪರಿಚಿತ ವ್ಯಕ್ತಿ ವಿರುದ್ಧ ಎಫ್’ಐಆರ್ ದಾಖಲಿಸಿಕೊಂಡು ಆತನಿಗಾಗಿ ಶೋಧ ನಡೆಸುತ್ತಿದ್ದಾರೆ.
Also Read: ಶಿವಮೊಗ್ಗ-ತೀರ್ಥಹಳ್ಳಿ ರಸ್ತೆಯಲ್ಲಿ ವ್ಯಕ್ತಿಯ ಭೀಕರ ಹತ್ಯೆ: ಕೊಲೆಗೆ ಕಾರಣವೇನು?
ಪೊಲೀಸ್ ಮೂಲಗಳ ಪ್ರಕಾರ ಮಾರ್ಚ್ 19ರಂದು ಬೆಳಗ್ಗೆ 10.22ರ ಸುಮಾರಿಗೆ ಸುಧಾ ಅವರ ಸಹೋದ್ಯೊಗಿ ವಕೀಲರ ಮೊಬೈಲ್ ವಾಟ್ಸಪ್’ಗೆ ಸುಮಾರು ನಾಲ್ಕು ನಿಮಿಷದ ವೀಡಿಯೊವೊಂದು ಬಂದಿದೆ. ಈ ವಿಡಿಯೋ ತಮಿಳು ಭಾಷೆಯಲ್ಲಿದ್ದು, ಹಿಜಾಬ್ ವಿವಾದದ ತೀರ್ಪು ನೀಡಿದ ಕರ್ನಾಟಕ ಹೈಕೋಟ್’ನ ನ್ಯಾಯಾಮೂರ್ತಿಗಳ ಬಗ್ಗೆ ಏಕವಚನದಲ್ಲಿಯೇ ನಿಂದಿಸಿದ್ದಾನೆ. ಜತೆಗೆ ಪ್ರಾಣ ಬೆದರಿಕೆ ಹಾಕಿದ್ದಾನೆ. ಈ ಮೂಲಕ ರಾಷ್ಟ್ರೀಯ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ರೀತಿಯಲ್ಲಿ ಹಾಗೂ ವಿವಿಧ ಗುಂಪುಗಳ ಮಧ್ಯೆ ದ್ವೇಷ ಉಂಟು ಮಾಡುವ ರೀತಿಯಲ್ಲಿ ಮಾತನಾಡಿದ್ದಾನೆ. ಈ ಸಂಬಂಧ ಅಪರಿಚಿತ ವ್ಯಕ್ತಿಯ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಸುಧಾ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ತೌಹೀದ್ ಜಮಾತ್’ನಿಂದ ಬೆದರಿಕೆ
ಹಿಜಾಬ್ ವಿವಾದ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಪರವಾಗಿ ಆದೇಶ ನೀಡುವ ಮೂಲಕ ಹಿಜಾಬ್ ತಮ್ಮ ಹಕ್ಕು ಎಂದು ಪ್ರತಿಪಾದಿಸಿದ್ದ ವಿದ್ಯಾರ್ಥಿನಿಯರ ವಾದವನ್ನು ತಿರಸ್ಕರಿಸಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ತಮಿಳುನಾಡಿನ ತೌಹೀದ್ ಜಮಾತ್ ಸಂಘಟನೆಯಿಂದ ಬೆದರಿಕೆ ಬಂದಿದೆ ಎನ್ನಲಾಗಿದೆ. ಮಧುರೈನಲ್ಲಿ ಮಾರ್ಚ್ 17ರಂದು ನಡೆದಿದ್ದ ಬಹಿರಂಗ ಸಮಾವೇಶದಲ್ಲಿ ತಮಿಳುನಾಡು ತೌಹೀದ್ ಜಮಾತ್ (ಟಿಎಂಟಿಜೆ) ಹೆಸರಿನ ಮುಸ್ಲಿಂ ಸಂಘಟನೆಯ ಮುಖಂಡ ಆರ್. ರೆಹಮತುಲ್ಲಾ, ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ಜಾರ್ಖಂಡ್’ನಲ್ಲಿ ನ್ಯಾಯಮೂರ್ತಿಯೊಬ್ಬರ ಹತ್ಯೆ ನಡೆದ ಘಟನೆಯನ್ನು ಉಲ್ಲೇಖಿಸಿದ್ದ ಆತ, ಹಿಜಾಬ್ ತೀರ್ಪಿನಿಂದಾಗಿ ನ್ಯಾಯಮೂರ್ತಿಗಳ ಕೊಲೆಯಾದರೆ ಅದಕ್ಕೆ ಅವರೇ ಕಾರಣರಾಗಿರುತ್ತಾರೆ. ನಾವು ಮೋದಿ, ಅಮಿತ್ ಶಾ ಅಥವಾ ಯೋಗಿ ಆದಿತ್ಯನಾಥ್ ಅವರಿಗೆ ಹೆದರುವುದಿಲ್ಲ. ಅಲ್ಲಾಹುವಿಗೆ ಮಾತ್ರ ಹೆದರುವುದು. ನಮ್ಮ ತಾಳ್ಮೆ ಕಳೆದುಕೊಳ್ಳುವಂತೆ ಮಾಡಬೇಡಿ. ಒಂದು ವೇಳೆ ಸಹನೆ ಕಳೆದುಕೊಂಡರೆ ನೀವು ಉಳಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದ. ರೆಹಮತುಲ್ಲಾ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಪೊಲೀಸರು ತಮಿಳುನಾಡು ಪೊಲೀಸ್ ಮುಖ್ಯಸ್ಥರ ಜತೆ ಚರ್ಚೆ ನಡೆಸಿದ್ದಾರೆ.
Also Read: ಮಾ.21ರಂದು ನವೀನ್ ಮೃತದೇಹ ತಾಯ್ನಾಡಿಗೆ: ಮುಖ್ಯಮಂತ್ರಿ ಬೊಮ್ಮಾಯಿ
ಹೈಕೋರ್ಟ್ ಕೂಡ ಕ್ರಿಮಿನಲ್ ನ್ಯಾಯಾಂಗ ನಿಂದನೆ ಆರೋಪದಡಿ ಸುಮೊಟೋ ಪ್ರಕರಣ ದಾಖಲಿಸಿದೆ. ತಮಿಳುನಾಡಿನಲ್ಲಿ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣ ಸಂಬಂಧ ಐಪಿಸಿ ಸೆಕ್ಷನ್ 506(ಬೆದರಿಕೆ), 501(1)(ಮಾನಹಾನಿ), 503(ಕ್ರಿಮಿನಲ್ ಬೆದರಿಕೆ), 109(ಪ್ರಚೋದನೆ), 504(ಶಾಂತಿ ಭಂಗ), 505(ಸಾರ್ವಜನಿಕ ಕಿಡಿಗೇಡಿತನ) ಸೇರಿದಂತೆ ವಿವಿಧ ಸೆಕ್ಷನ್’ಗಳಲ್ಲಿ ಎಫ್’ಐಆರ್ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post