No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Sunday, March 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ತಡೆಗಟ್ಟಲು ಎಲ್ಲರ ಸಹಕಾರ ಅಗತ್ಯ: ಡಿಸಿ ಡಾ. ಸೆಲ್ವಮಣಿ

ವಿಭಾಗೀಯ ಮಟ್ಟದ ಪಿ.ಸಿ. ಮತ್ತು ಪಿ.ಎನ್.ಡಿ.ಟಿ ಕಾರ್ಯಾಗಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 21, 2022
in ಶಿವಮೊಗ್ಗ
0
ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ತಡೆಗಟ್ಟಲು ಎಲ್ಲರ ಸಹಕಾರ ಅಗತ್ಯ: ಡಿಸಿ ಡಾ. ಸೆಲ್ವಮಣಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡದಂತೆ ಹಾಗೂ ಹೆಣ್ಣು ಮಕ್ಕಳ ಲಿಂಗಾನುಪಾತವನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಗರ್ಭಧಾರಣ ಪೂರ್ವ ಮತ್ತು ಪ್ರಸವಪೂರ್ವ ಪತ್ತೆತಂತ್ರ ವಿಧಾನಗಳ (ಲಿಂಗ ಆಯ್ಕೆ ನಿಷೇಧ) ಕಾಯ್ದೆ 1994 ನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಆರೋಗ್ಯ ಇಲಾಖೆಯೊಂದಿಗೆ ಎಲ್ಲ ಇಲಾಖೆಗಳು, ಸಂಘ ಸಂಸ್ಥೆಗಳು ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ DC Dr. R Selvamani ಹೇಳಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ, ರಾಜ್ಯ ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕೋಶ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಬೆಂಗಳೂರು ವಿಭಾಗ ಇವರ ವತಿಯಿಂದ ಇಂದು ನಗರದ ಬಿ.ಹೆಚ್.ರಸ್ತೆಯ ರಾಯಲ್ ಆರ್ಕಿಡ್ ಸೆಂಟ್ರಲ್ ಇಲ್ಲಿ ಏರ್ಪಡಿಸಲಾಗಿದ್ದ ವಿಭಾಗೀಯ ಮಟ್ಟದ ಪಿ.ಸಿ. ಮತ್ತು ಪಿ.ಎನ್.ಡಿ.ಟಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರೋಗ ಪತ್ತೆಯಂತಹ ಒಳ್ಳೆಯ ಉದ್ದೇಶಕ್ಕೆ ಬಳಕೆಯಾಗಬೇಕಾದ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ತಂತ್ರಜ್ಞಾನವನ್ನು ಹೆಣ್ಣು ಭ್ರೂಣ ಪತ್ತೆಗಾಗಿ ದುರುಪಯೋಗ ಪಡೆಸಿಕೊಳ್ಳಲಾಗುತ್ತಿದೆ. ಈ ದುರುಪಯೋಗವನ್ನು ನಿಯಂತ್ರಿಸಲು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಸಲಹಾ ಮಂಡಳಿ ಹಾಗೂ ತಪಾಸಣಾ ಸಮಿತಿಗಳಿದ್ದು, ಬಹಳಷ್ಟು ಸ್ಟಿಂಗ್ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗುತ್ತಿದೆ. ಆದರೂ ಸಹ ಈ ಜಿಲ್ಲೆಯಿಂದ ಬೇರೆ ಜಿಲ್ಲೆ, ಬೇರೆ ಪ್ರದೇಶಗಳಿಗೆ ಹೋಗಿ ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆಯಾಗುತ್ತಿರುವುದನ್ನು ಕಾಣುತ್ತಿದ್ದೇವೆ. ಹಾಗೂ ಅನಧಿಕೃತವಾಗಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಷೀನ್‍ಗಳನ್ನು ಇರಿಸಿಕೊಂಡು ವ್ಯವಹರಿಸಲಾಗುತ್ತಿದೆ. ಸಮಿತಿಗಳಿದ್ದರೂ ಸಹ ಸಂಪೂರ್ಣವಾಗಿ ಇದನ್ನು ತಡೆಗಟ್ಟಲು ಆಗಿಲ್ಲ. ಇದನ್ನು ತಡೆಗಟ್ಟಲು ಕೇವಲ ಆರೋಗ್ಯ ಇಲಾಖೆಯಿಂದ ಮಾತ್ರ ಸಾಧ್ಯವಿಲ್ಲ, ಆರೋಗ್ಯ ಇಲಾಖೆಗೆ ಸಂಬಂಧಿಸಿದ ಎಲ್ಲ ವಿಭಾಗಗಳು, ಐಎಂಎ, ಎನ್‍ಜಿಓ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಕೈಜೋಡಿಸಬೇಕು ಎಂದರು.

ಮುಖ್ಯವಾಗಿ ಸಮಾಜ ಹೆಣ್ಣುಮಕ್ಕಳನ್ನು ನೋಡುವ ದೃಷ್ಟಿಕೋನ ಬದಲಾಗಬೇಕು. ಸಮುದಾಯದಲ್ಲಿನ ಮೂಢನಂಬಿಕೆ ಹೋಗಲಾಡಿಸಲು ಹೆಚ್ಚಿನ ಪ್ರಯತ್ನಗಳು ಆಗಬೇಕು. ಹಾಗೂ ಇದಕ್ಕೆ ಎಲ್ಲರೂ ಸಹಕರಿಸಬೇಕೆಂದರು.

ಇಂದಿನ ಕಾರ್ಯಾಗಾರದಲ್ಲಿ ಬೆಂಗಳೂರು ವಿಭಾಗ ವ್ಯಾಪ್ತಿಯ 9 ಜಿಲ್ಲೆಗಳ ಡಿಹೆಚ್‍ಓ ಸೇರಿದಂತೆ ಪಿಸಿ & ಪಿಎನ್‍ಡಿಸಿಟಿ ಸದಸ್ಯರು, ವೈದ್ಯರು ಬಂದಿದ್ದು ಎಲ್ಲ ಸೇರಿ ಹೆಣ್ಣು ಭ್ರೂಣ ಹತ್ಯೆ ತಡೆ ಹಾಗೂ ಹೆಣ್ಣು ಮಕ್ಕಳ ಲಿಂಗಾನುಪಾತ ಹೆಚ್ಚಿಸಲು ಒಂದು ಮೂಲ ನಕ್ಷೆ ತಯಾರಿಸಬೇಕು. ಕಾರ್ಯಕ್ರವನ್ನು ಅರ್ಥಪೂರ್ಣಗೊಳಿಸಿ ಫಲಪ್ರದವಾಗುವಂತೆ ಮಾಡಬೇಕೆಂದು ಕರೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ ಮಾತನಾಡಿ, ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ತಡೆಯುವ ನಿಟ್ಟಿನಲ್ಲಿ ಡಿಹೆಚ್‍ಓ ನೇತೃತ್ವದ ತಂಡ ಜಿಲ್ಲೆಯಲ್ಲಿ ಅನೇಕ ಬಾರಿ ದಿಢೀರ್ ದಾಳಿ ನಡೆಸುತ್ತ ಬಂದಿದೆ. ಈ ತಂಡ ಇನ್ನೂ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು. ಜೊತೆಗೆ ನಿಯಮಿತವಾಗಿ ಜಿಲ್ಲೆಯಲ್ಲಿ ಒಟ್ಟು ಗರ್ಭಧಾರಣೆ, ಪ್ರಸವ ಮತ್ತು ಇವರೆಡರ ನಡುವಿನ ವ್ಯತ್ಯಾಸ ಮತ್ತು ಅದಕ್ಕೆ ಕಾರಣಗಳನ್ನು ಪರಿಶೀಲಿಸುತ್ತಾ ಇರಬೇಕು. ಯಾರಾದರೂ ಕಾನೂನುಬಾಹಿರವಾಗಿ ಭ್ರೂಣ ಪತ್ತೆ ಅಥವಾ ಹತ್ಯೆಗೆ ಕೇಳಿಕೊಂಡರೆ ಅಂತಹವರಿಗೆ ಮನವರಿಕೆ ಮಾಡಬೇಕು ಎಂದರು.

Also read: ಪ್ರಿಯತಮ ಕೈಕೊಟ್ಟ ಹಿನ್ನೆಲೆ: ಆತ್ಮಹತ್ಯೆಗೆ ಶರಣಾದ ಯುವತಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಪಿ.ಸಿ.ಎನ್.ಡಿ.ಟಿ ಉಪ ನಿರ್ದೇಶಕ ಡಾ.ವಿವೇಕ್ ದೊರೈ ಪಿಪಿಟಿ ಪ್ರದರ್ಶನ ಮೂಲಕ ಗರ್ಭಧಾರಣ ಪೂರ್ವ ಮತ್ತು ಪ್ರಸವಪೂರ್ವ ಪತ್ತೆತಂತ್ರ ವಿಧಾನಗಳ (ಲಿಂಗ ಆಯ್ಕೆ ನಿಷೇಧ) ಕಾಯ್ದೆ 1994(ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆ) ಹಾಗೂ ಹೆಣ್ಣುಭ್ರೂಣ ಪತ್ತೆ ಮತ್ತು ಹತ್ಯೆ ತಡೆ ಜೊತೆಗೆ ಹೆಣ್ಣು ಲಿಂಗಾನುಪಾತ ಹೆಚ್ಚಿಸುವ ಕುರಿತಾದ ಅಂಶಗಳ ಬಗ್ಗೆ ಮಾತನಾಡಿದರು.

ಬೆಂಗಳೂರು ವಿಭಾಗದ ವಿಭಾಗೀಯ ಜಂಟಿ ನಿರ್ದೇಶಕರ ಕಚೇರಿಯ ಉಪನಿರ್ದೇಶಕಿ ಡಾ.ಮಮತ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಕಾಯ್ದೆ ಕುರಿತು ಮಾತನಾಡಿದರು.

ಡಿಹೆಚ್ ಓ ಡಾ.ರಾಜೇಶ್ ಸುರಗಿಹಳ್ಳಿ ಸ್ವಾಗತಿಸಿದರು, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ ನಾಗಲೀಕರ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DC Dr. R SelvamaniKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share203Tweet123Send
Previous Post

ಪ್ರಿಯತಮ ಕೈಕೊಟ್ಟ ಹಿನ್ನೆಲೆ: ಆತ್ಮಹತ್ಯೆಗೆ ಶರಣಾದ ಯುವತಿ

Next Post

ಪುನೀತ್ ರಾಜ್ ಕುಮಾರ್ ಸೇರಿ 60 ಹಿರಿಯ ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪುನೀತ್ ರಾಜ್ ಕುಮಾರ್ ಸೇರಿ 60 ಹಿರಿಯ ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ

ಪುನೀತ್ ರಾಜ್ ಕುಮಾರ್ ಸೇರಿ 60 ಹಿರಿಯ ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

February 28, 2026
ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

February 28, 2026
ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

February 28, 2026
ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

February 28, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 1 ರಂದು ಬೆಂಗಳೂರಿನಿಂದ ಮುಂಬೈಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

February 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL