ಕಲ್ಪ ಮೀಡಿಯಾ ಹೌಸ್ | ಸೊರಬ |
ಕೆರೆಯಲ್ಲಿ ಎತ್ತುಗಳ ಮೈತೊಳೆಯಲು ಹೋಗಿ ಯುವಕನೊಬ್ಬ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ತವನಂದಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ತವನಂದಿ ಗ್ರಾಮದ ಪುಟ್ಟಪ್ಪ ಅವರ ಪುತ್ರ ಮಧುಸೂಧನ (23) ಮೃತ ದುರ್ಧೈವಿ. ಗ್ರಾಮದ ದೊಡ್ಡ ಕೆರೆಯಲ್ಲಿ ಎತ್ತುಗಳ ಮೈ ತೊಳೆಯುತ್ತಿದ್ದ ಸಂದರ್ಭದಲ್ಲಿ ಎತ್ತುಗಳು ನೀರಿಗೆ ಎಳೆದಿವೆ. ಈ ವೇಳೆ ಈಜು ಬಾರದೇ ಮಧುಸೂಧನ್ ನೀರಿನಲ್ಲಿ ಮುಳುಗಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಠಾಣೆ ಸಿಬ್ಬಂದಿ ತೆರಳಿ ಸ್ಥಳೀಯರ ಸಹಕಾರದೊಂದಿಗೆ ಸತತ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಮೃತ ದೇಹವನ್ನು ಪತ್ತೆ ಮಾಡಿದ್ದಾರೆ.
Also read: ವಿಜಯನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಡಿಜಿಟಲ್ ಅಭಿಯಾನ ಹೆಚ್ಚಳ: ರಾಜಶೇಖರ್ ಹಿಟ್ನಾಳ್ ಕೈ ಅಭ್ಯರ್ಥಿ?
ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post