ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 150ಎಯಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, ಎರಡು ಎತ್ತುಗಳು ಗಂಭಿರಗಾಯಗೊಂಡಿರುವ ಘಟನೆ ನಡೆದಿದೆ.
ಮೊಳಕಾಲ್ಮೂರು ವಿಧನಾಸಭಾ ಕ್ಷೇತ್ರ ವ್ಯಾಪ್ತಿಯ ಹಿರೇಹಳ್ಳಿ ಗ್ರಾಮದ ಬಳಿ ಈ ದುರಂತ ಸಂಭವಿಸಿದ್ದು, ರಸ್ತೆಯಲ್ಲಿ ಹಾದು ಹೋಗುತ್ತಿದ್ದ ಎತ್ತಿನ ಗಾಡಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಹಿರೇಹಳ್ಳಿಯ ರೈತ ತಿಪ್ಪೇಸ್ವಾಮಿ (40) ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಸುರೇಶ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಎರಡು ಎತ್ತುಗಳಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.
ಹಿರಿಯ ಹಳ್ಳಿಯಿಂದ ಬಿಜಿ ಕೆರೆಗೆ ಗಾಡಿ ಚಕ್ರ ಸರಿಪಡಿಸಲೆಂದು ಹೋಗುತ್ತಿದ್ದ ಸಮಯದಲ್ಲಿ ಬಳ್ಳಾರಿ ಕಡೆಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದು ಸ್ವಲ್ಪ ದೂರ ಎಳೆದುಕೊಂಡು ಹೋದ ಪರಿಣಾಮ ಮರದ ಬಂಡಿಯು ಪುಡಿಪುಡಿಯಾಗಿದೆ.
ಘಟನಾ ಸ್ಥಳಕ್ಕೆ ವೃತ್ತ ನಿರೀಕ್ಷಕ ಕೆ. ಸೆಮಿವುಲ್ಲಾ, ಪಿಎ ಮಾರುತಿ ಭೇಟಿ ನೀಡಿ, ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
Also read: ಶೀಘ್ರದಲ್ಲೇ ಶಿವಮೊಗ್ಗ ಜಿಲ್ಲೆಯಲ್ಲಿ ಎಂಎಸ್‌ಐಎಲ್ ಮದ್ಯ ಮಾರಾಟ ಮಳಿಗೆ: ಸಚಿವ ಗೋಪಾಲಯ್ಯ
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post