ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಿಜಾಬ್ Hijab ಕುರಿತಾಗಿನ ತುರ್ತು ಅರ್ಜಿ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ Supreme Court ಇಂದು ಹೇಳಿರುವ ಬೆನ್ನಲ್ಲೆ, ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ Minister B C Nagesh ಸ್ಪಷ್ಟಪಡಿಸಿದ್ದಾರೆ.
ರಾಜ್ಯದಾದ್ಯಂತ ಸೋಮವಾರದಿಂದ ಎಸ್‌ಎಸ್‌ಎಲ್‌ಸಿ SSLC ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಮಾತನಾಡಿದ ಶಿಕ್ಷಣ ಸಚಿವರು, ಯಾವುದೇ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದರೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ. ಈ ಕುರಿತಂತೆ ರಾಜ್ಯ ಹೈಕೋರ್ಟ್ ಆದೇಶವನ್ನು ಶಿಕ್ಷಣ ಇಲಾಖೆ ಕಟ್ಟುನಿಟ್ಟಾಗಿ ಪಾಲಿಸಲಿದೆ. ಇದನ್ನು ವಿದ್ಯಾರ್ಥಿನಿಯರು ಗಮನದಲ್ಲಿಟ್ಟುಕೊಂಟು ತಮ್ಮ ನಿರ್ಧಾರ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
Also read: ಹಿಜಾಬ್‌ಗೂ ಪರೀಕ್ಷೆಗೂ ಸಂಬಂಧವಿಲ್ಲ: ತುರ್ತು ವಿಚಾರಣೆಗೆ ಸುಪ್ರೀಂ ಸ್ಪಷ್ಟ ನಕಾರ
ಸೋಮವಾರದಿಂದ ಆರಂಭವಾಗುತ್ತಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಈ ಬಾರಿ 8.46ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post