ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹೊಸನಗರ ತಾಲೂಕಿನ ಮೇಲಿಗೆಬೆಸಿಗೆ ಗ್ರಾಮದ ಮಹಿಳೆಯೊಬ್ಬರಿಗೆ ಅಡುಗೆ ಮಾಡುವಾಗ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸೌಮ್ಯ (24) ಮೃತ ಮಹಿಳೆಯಾಗಿದ್ದು, ಅಡುಗೆ ಮನೆಗೆ ಹೋದಾಗ ಕಾಲಿಗೆ ವಿಷಕಾರಿ ಹಾವು ಕಚ್ಚಿತ್ತು. ಸ್ವಲ್ಪ ಸಮಯದ ಬಳಿಕ ಕಾಲಿನಲ್ಲಿ ಊತ ಕಾಣಿಸಿಕೊಂಡು ತೀವ್ರ ನೋವು ಉಂಟಾಗಿದೆ. ಹಾವು ಕಚ್ಚಿರುವ ಬಗ್ಗೆ ಅನುಮಾನಗೊಂಡು ಹೊಸನಗರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ
ನಾಲ್ಕು ವರ್ಷದ ಹಿಂದೆ ನಾಗರಾಜ್ ಎಂಬುವರ ಜೊತೆ ಸೌಮ್ಯ ವಿವಾಹವಾಗಿದ್ದರು. ಮೃತರಿಗೆ ಮೂರು ವರ್ಷದ ಗಂಡು ಮಗನಿದ್ದಾನೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post