ಕಲ್ಪ ಮೀಡಿಯಾ ಹೌಸ್ | ಮುಂಬೈ |
ನಟಿ ಕಂಗನಾ ರಾಣಾವತ್ Actress Kangana Ranavath ಓರ್ವ ಸೆಲೆಬ್ರೆಟಿ ಆಗಿರಬಹುದು. ಆದರೆ, ಆಕೆಯೂ ಒಂದು ಪ್ರಕರಣದಲ್ಲಿ ಆರೋಪಿಯಷ್ಟೆ ಎಂದು ಮುಂಬೈ ಕೋರ್ಟ್ Mumbai Court ಚಾಟಿ ಬೀಸಿದೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ವಿನಾಯ್ತಿ ನೀಡಲು ಕೋರಲಾಗಿದ್ದ ವಿಚಾರದಲ್ಲಿ ನ್ಯಾಯಾಲಯ ಕಟು ಶಬ್ದಗಳಲ್ಲಿ ಹೇಳಿದೆ.
ಸುದ್ದಿ ವಾಹಿನಿಯೊಂದರ ಸಂದರ್ಶನದಲ್ಲಿ ಕಂಗನಾ ರಣಾವತ್, ಬಾಲಿವುಡ್ ಗೀತರಚನೆಕಾರ ಜಾವೇದ್ ಅಖ್ತರ್ Javed Akthar ಅವರ ಖ್ಯಾತಿಗೆ ಧಕ್ಕೆ ಉಂಟು ಮಾಡುವ ಹೇಳಿಕೆ ನೀಡಿದ್ದರು. ಇದು ಭಾರೀ ವೈರಲ್ ಆಗಿತ್ತು. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಕಂಗನಾ ರಣಾವತ್ ತಮ್ಮ ಹೆಸರನ್ನು ಅನಗತ್ಯವಾಗಿ ಎಳೆದಿದ್ದು, ಇದರಿಂದ ತಮ್ಮ ಘನತೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಜಾವೇದ್ ಅಖ್ತರ್ ಅವರು 2020ರಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಜಾವೇದ್ ಅಖ್ತರ್ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಗೆ ಹಾಜರಾಗಲು ಶಾಶ್ವತ ವಿನಾಯ್ತಿ ನೀಡುವಂತೆ ಕಂಗನಾ ಅವರು ಮನವಿ ಮಾಡಿದ್ದರು. ಹಿಂದಿ ಸಿನಿಮಾ ಕ್ಷೇತ್ರದ ದೊಡ್ಡ ನಟಿಯರ ಪೈಕಿ ತಾವು ಒಬ್ಬರಾಗಿದ್ದು, ದೇಶ ಮತ್ತು ವಿದೇಶದ ವಿವಿಧ ಭಾಗಗಳಿಗೆ ಸಂಚರಿಸುತ್ತಿರಬೇಕಾಗುತ್ತದೆ. ಹೀಗಾಗಿ ನ್ಯಾಯಾಲಯಕ್ಕೆ ಹಾಜರಾಗುವ ಪ್ರಕ್ರಿಯೆಯಿಂದ ವಿನಾಯ್ತಿ ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.
Also read: ಟಿಪ್ಪು ಸುಲ್ತಾನ್ ವೈಭವೀಕರಣಕ್ಕೆ ಪಠ್ಯದಲ್ಲಿ ಕತ್ತರಿ! ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ವರದಿ ಸಲ್ಲಿಕೆ
ಈ ಅರ್ಜಿಯನ್ನು ತಿರಸ್ಕರಿಸಿರುವ ನ್ಯಾಯಾಲಯ ಕಂಗನಾ ಓರ್ವ ಸೆಲೆಬ್ರೆಟಿಯಾಗಿರಬಹುದು. ಆದರೆ, ಅವರು ನಮಗೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದಾರೆ ಎಂಬುದನ್ನು ಮರೆಯಲು ಸಾಧ್ಯವಿಲ್ಲ. ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯ್ತಿ ನೀಡಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ತಿರಸ್ಕರಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post