No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜೀವವೈವಿಧ್ಯತೆಯ ಸಂರಕ್ಷಣೆ ಮತ್ತು ಅಭಿವೃದ್ಧಿ ಚಟುವಟಿಕೆಗಳ ಸಮತೋಲನ ಅಗತ್ಯ: ಡಾ. ಸತ್ಯಪ್ರಕಾಶ್

ಕುವೆಂಪು ವಿವಿಯಲ್ಲಿ ವಿಶ್ವ ವನ್ಯಜೀವಿ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ

kalpa News by kalpa News
March 31, 2022
in ಶಿವಮೊಗ್ಗ
0
ಜೀವವೈವಿಧ್ಯತೆಯ ಸಂರಕ್ಷಣೆ ಮತ್ತು ಅಭಿವೃದ್ಧಿ ಚಟುವಟಿಕೆಗಳ ಸಮತೋಲನ ಅಗತ್ಯ: ಡಾ. ಸತ್ಯಪ್ರಕಾಶ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಜೀವವೈವಿಧ್ಯತೆಯ ಸಂರಕ್ಷಣೆ ಮತ್ತು ಅಭಿವೃದ್ಧಿ ಚಟುವಟಿಕೆಗಳ ನಡುವೆ ಸಮತೋಲನ ಕಾಯ್ದುಕೊಳ್ಳದೆ ಹೋದರೆ ಮುಂದಿನ ದಿನಗಳಲ್ಲಿ ಹವಾಮಾನ ವೈಪರೀತ್ಯಗಳಂತಹ ಮಾನವ ನಿರ್ಮಿತ ದುರಂತಗಳನ್ನು ತಪ್ಪಿಸಲು ಸಾಧ್ಯವಾಗುವುದಿಲ್ಲ ಎಂದು ಕುವೆಂಪು ವಿಶ್ವವಿದ್ಯಾಲಯದ Kuvempu University ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಸತ್ಯಪ್ರಕಾಶ್ ಎಂ. ಆರ್. ಅಭಿಪ್ರಾಯಪಟ್ಟರು.

ವಿಶ್ವ ವನ್ಯಜೀವಿ ದಿನದ ಪ್ರಯುಕ್ತ ವಿಶ್ವವಿದ್ಯಾಲಯದ ವನ್ಯಜೀವಿ ನಿರ್ವಹಣಾ ವಿಭಾಗದ ವತಿಯಿಂದ ಆಯೋಜಿಸಲಾಗಿರುವ ಮೂರು ದಿವಸಗಳ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

2021ರ ಅಂತ್ಯದ ವೇಳೆಗೆ ಭಾರತದ ಅರಣ್ಯ ವ್ಯಾಪ್ತಿ 2,261 ಚದುರ ಕಿ.ಮೀ ಇದ್ದು, ಒಟ್ಟಾರೆ ಭೂಭಾಗದ ಶೇ. 24.62ರಷ್ಟಿದೆ ಎಂದು ಕೇಂದ್ರ ಸರ್ಕಾರದ ಪರಿಸರ ಸಚಿವಾಲಯ ಬಿಡುಗಡೆ ಮಾಡಿರುವ ಭಾರತೀಯ ಅರಣ್ಯ ಸಮೀಕ್ಷೆಯ ವರದಿ ತಿಳಿಸಿರುವುದು ಚೇತೋಹಾರಿ ವಿಚಾರ. ಆದರೆ, ಸರ್ಕಾರಗಳು ನದಿ ಜೋಡಣೆ, ಬಹು ಉದ್ದೇಶಿತ ಬೃಹತ್ ಅಣೆಕಟ್ಟುಗಳ ನಿರ್ಮಾಣ, ಹೆದ್ದಾರಿಗಳು ಮತ್ತು ರೈಲ್ವೆ ಮಾರ್ಗಗಳ ನಿರ್ಮಾಣ, ಹೀಗೆ ಬೃಹತ್ ಯೋಜನೆಗಳ ಬಗೆಗೇ ಹೆಚ್ಚು ಆಸಕ್ತಿ ತೋರುತ್ತಿರುವುದರಿಂದ ಪರಿಸರ ಸಂರಕ್ಷಣೆಗೆ ವ್ಯತಿರಿಕ್ತವಾಗಿ ಪರಿಣಮಿಸುವ ಸಾಧ್ಯತೆ ಇದೆ.

ವಿಶೇಷ ಆರ್ಥಿಕ ವಲಯಗಳ ಸ್ಥಾಪನೆ, ಬಡಾವಣೆಗಳ ನಿರ್ಮಾಣ, ಬೃಹತ್ ಅಣೆಕಟ್ಟುಗಳು, ಹೀಗೆ ವಿವಿಧ ಮೂಲಸೌಕರ್ಯಗಳ ಯೋಜನೆಗಳಿಗೆ ಕೃಷಿ ಮತ್ತು ಅರಣ್ಯ ಭೂಮಿಯೇ ಹೆಚ್ಚು ಬಳಕೆಯಾಗುತ್ತಿರುವುದು. ಇಂಥಹಾ ಅಭಿವೃದ್ಧಿ ಯೋಜನೆಗಳ ಅನುಷ್ಠಾನದಿಂದ ಒಂದೆಡೆ ಅರಣ್ಯವನ್ನು ಅವಲಂಬಿಸಿರುವ ಸಮುದಾಯಗಳು, ಮತ್ತು ಗ್ರಾಮಸ್ಥರು ನಿರಾಶ್ರಿತರಾದರೆ, ಇನ್ನೊಂದೆಡೆ ಆ ಭಾಗದ ಜೀವ ಸಂಕುಲ ಮತ್ತು ಅರಣ್ಯ ಪ್ರದೇಶವೇ ನಾಶವಾಗುತ್ತದೆ. ಹೀಗಾಗಿ ಅಭಿವೃದ್ಧಿ ಯೋಜನೆಗಳನ್ನು ಸುಸ್ಥಿರ ಪರಿಕಲ್ಪನೆಯಡಿ ಮರುವ್ಯಾಖ್ಯಾನಿಸುವ ಅನಿವಾರ್ಯತೆಯಿದೆ. ಹೀಗಾದಾಗ ಮಾತ್ರ ಜೀವವೈವಿಧ್ಯತೆ, ಮತ್ತು ವನ್ಯಜೀವಿಗಳ ಸಂರಕ್ಷಣೆ ಸಾಧ್ಯ ಎಂದರು.


ವಿಭಾಗದ ಅಧ್ಯಕ್ಷ ಪ್ರೊ. ವಿಜಯಕುಮಾರ ಮಾತನಾಡಿ, ವನ್ಯಜೀವಿಗಳ ಸಂರಕ್ಷಣೆ ಒಟ್ಟಾರೆ ಅರಣ್ಯ ಪ್ರದೇಶದ ಉಳಿವಿಗೆ ನೇರವಾಗಿ ಸಂಬಂಧಪಟ್ಟಿದೆ. ಪರಿಸರದ ಆಡಿಟಿಂಗ್, ಪರಿಣಾಮಗಳ ಅಧ್ಯಯನಗಳನ್ನು ಕೈಗೊಳ್ಳದೆ ಯಾವುದೇ ರೀತಿಯ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಸೂಕ್ತವಲ್ಲ. ಈ ರೀತಿಯ ವಿದ್ಯಮಾನಗಳನ್ನು ಪ್ರಶ್ನಿಸುವ ಧೋರಣೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

Also read: ಬೆಲೆಯೇರಿಕೆ ಮುಕ್ತ ಭಾರತ ಅಭಿಯಾನ ನಿಮಿತ್ತ ಕಾಂಗ್ರೆಸ್ ಮುಖಂಡರ ಪ್ರತಿಭಟನೆ

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಡಾ. ಹರೀಶ್ ಪ್ರಕಾಶ್ ಪರಿಸರ ಅಧ್ಯಯನ ಕುರಿತು ವಿಶೇಷ ಉಪನ್ಯಾಸ ನೀಡಿದರು. ಡಾ. ಪ್ರಮೋದ್, ಡಾ. ಹರೀಶ್, ಡಾ. ರಾಘವೇಂದ್ರ ಗೌಡ, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversityLatest News KannadaLocal NewsNewsinKannadaNewsKannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಲೆಯೇರಿಕೆ ಮುಕ್ತ ಭಾರತ ಅಭಿಯಾನ ನಿಮಿತ್ತ ಕಾಂಗ್ರೆಸ್ ಮುಖಂಡರ ಪ್ರತಿಭಟನೆ

Next Post

ಏ.1ರಂದು ರಾಜ್ಯಕ್ಕೆ ಅಮಿತ್ ಷಾ : ಯಶಸ್ವಿನಿ, ನಂದಿನ ಕ್ಷೀರ ಅಭಿವೃದ್ಧಿ ಬ್ಯಾಂಕಿಗೆ ಚಾಲನೆ – ಸಿಎಂ

kalpa News

kalpa News

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಏ.1ರಂದು ರಾಜ್ಯಕ್ಕೆ ಅಮಿತ್ ಷಾ : ಯಶಸ್ವಿನಿ, ನಂದಿನ ಕ್ಷೀರ ಅಭಿವೃದ್ಧಿ ಬ್ಯಾಂಕಿಗೆ ಚಾಲನೆ - ಸಿಎಂ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL