No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Tuesday, February 17, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮುಂಬರುವ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಗುರಿ ಇಟ್ಟುಕೊಂಡು ಸಾಗಬೇಕು: ರಾಹುಲ್ ಗಾಂಧಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 1, 2022
in ಬೆಂಗಳೂರು ನಗರ
0
ಮುಂಬರುವ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಗುರಿ ಇಟ್ಟುಕೊಂಡು ಸಾಗಬೇಕು: ರಾಹುಲ್ ಗಾಂಧಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

‘ಕರ್ನಾಟಕ ‌ಕಾಂಗ್ರೆಸ್ ಪರ ರಾಜ್ಯ. ಇದು ಸ್ವಾಭಾವಿಕ ಕಾಂಗ್ರೆಸ್ ರಾಜ್ಯ. ಎಲ್ಲ ನಾಯಕರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವುದು ಕಷ್ಟವಲ್ಲ. ಹೀಗಾಗಿ ಕಾಂಗ್ರೆಸ್ ನಾಯಕರೆಲ್ಲರೂ ಮುಂಬರುವ ಚುನಾವಣೆಯಲ್ಲಿ 150 ಕ್ಕಿಂತ ಒಂದು ಸ್ಥಾನವೂ ಕಡಿಮೆ ಗೆಲ್ಲಬಾರದು’ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ Rahul Gandhi ಅವರು ಟಾರ್ಗೆಟ್ ಕೊಟ್ಟಿದ್ದಾರೆ.

ರಾಹುಲ್ ಗಾಂಧಿ ಅವರು ಕೆಪಿಸಿಸಿ ಆಡಿಟೋರಿಯಂನಲ್ಲಿ ಶುಕ್ರವಾರ ರಾಜ್ಯ ಕಾಂಗ್ರೆಸ್ ನಾಯಕರ ಜತೆ ಸಭೆ ನಡೆಸಿದ್ದು, ಈ ಸಭೆಯಲ್ಲಿ ಪಕ್ಷ ಹೇಗೆ ಮುಂಬರುವ ಚುನಾವಣೆಯನ್ನು ಎದುರಿಸಬೇಕು ಎಂದು ಮಾರ್ಗದರ್ಶನ ನೀಡಿದರು.

‘ಈಗ ಕರ್ನಾಟಕದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಇದು ಜನರಿಂದ ಆಯ್ಕೆಯಾದ ಪರಿಪೂರ್ಣ ಸರ್ಕಾರವಲ್ಲ. ಹಣದ ಬಲದಿಂದ ರಚನೆಯಾಗಿರುವ ಅನೈತಿಕ ಸರ್ಕಾರ. ನಾವು ಮುಂಬರುವ ಚುನಾವಣೆಯನ್ನು ಅಲ್ಪ ಅಂತರದಿಂದ ಗೆಲ್ಲಬಾರದು. ನಾವು ಕನಿಷ್ಠಪಕ್ಷ 150 ಸ್ಥಾನವನ್ನು ಗೆಲ್ಲುವ ಗುರಿ ಇಟ್ಟುಕೊಂಡು ಸಾಗಬೇಕು. ನಾವು ಒಟ್ಟಾಗಿ, ಸರಿಯಾದ ವಿಚಾರ ಇಟ್ಟುಕೊಂಡು ಹೋರಾಟ ಮಾಡಿದರೆ ಇದು ಕಷ್ಟವಲ್ಲ. ನಾವು ಪಕ್ಷದ ಸೇವೆ ಮಾಡಿದವರನ್ನು ಪ್ರೋತ್ಸಾಹಿಸುತ್ತೇವೆ. ಕರ್ನಾಟಕದಲ್ಲಿ ಯಾರು ಕೆಲಸ ಮಾಡುತ್ತಿದ್ದಾರೆ, ಯಾರೂ ಕೆಲಸ ಮಾಡುತ್ತಿಲ್ಲ ಎಂಬುದು ಸ್ಪಷ್ಟವಾಗಿ ಕಾಣುತ್ತದೆ ಎಂದರು.

ನಾವು ಈ ವಿಚಾರದಲ್ಲಿ ಬಹಳ ಕಟ್ಟುನಿಟ್ಟಾಗಿ ಇರುತ್ತೇವೆ. ನಾವು ಟಿಕೆಟ್ ನೀಡುವಾಗ ಪಕ್ಷದ ಸೇವೆಯನ್ನು ಗಮನಿಸಿ ನೀಡುತ್ತೇವೆ. ಅವರು ಪಕ್ಷಕ್ಕೆ ಪ್ರಾಮಾಣಿಕವಾಗಿದ್ದು, ಪಕ್ಷದ ಪ್ರತಿನಿಧಿಯಾಗಿದ್ದರೆ ಅವರಿಗೆ ಸೂಕ್ತ ಅವಕಾಶ ಸ್ಥಾನಮಾನ ನೀಡಲಾಗುವುದು ಎಂದರು.

ನಾನು ಮೂರು ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡುತ್ತೇನೆ. ನಾವು 150 ಸ್ಥಾನ ಗೆಲ್ಲುವ ಗುರಿ ಹೊಂದಬೇಕು, ಪಕ್ಷಕ್ಕೆ ದುಡಿದವರಿಗೆ ಆದ್ಯತೆ ನೀಡಬೇಕು, ಮೆರಿಟ್ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಬೇಕು. ನಾವು ನಮ್ಮ ಕಾರ್ಯಕರ್ತರಿಗೆ ಸೂಕ್ತವಾದ ಮಾನ್ಯತೆ ನೀಡಬೇಕು. ನಾವು ಅಧಿಕಾರಕ್ಕೆ ಬಂದ ನಂತರ ಅವರಿಗಾಗಿ ಕೆಲಸ ಮಾಡಬೇಕು. ಇದಿಷ್ಟು ಸಂಘಟನೆ ವಿಚಾರ ಎಂದು ಹೇಳಿದರು.

ಇನ್ನು ದೇಶದಲ್ಲಿ ಬಿಜೆಪಿ ಸರ್ಕಾರದ ಆಡಳಿತ ವಿಚಾರದ ಬಗ್ಗೆ ಮಾತನಾಡುವುದಾದರೆ, ದೇಶ ಹಾಗೂ ರಾಜ್ಯದ ಮುಂದೆ ನಿರುದ್ಯೋಗ ಸಮಸ್ಯೆ ದೊಡ್ಡದಾಗಿದೆ. ದೇಶದ ಆರ್ಥಿಕತೆ ಹಾಳಾಗಿದೆ, ಬೆಲೆ ಏರಿಕೆ ಹೆಚ್ಚಾಗಿದೆ. ನಮ್ಮ ಶಕ್ತಿಯಾಗಿದ್ದ ಆರ್ಥಿಕತೆ ದುರ್ಬಲವಾಗಿದೆ. ಇದೆಲ್ಲವೂ ನಮ್ಮ ಮುಂದಿರುವ ಸವಾಲು.

ನೋಟು ರದ್ಧತಿ, ಕೆಟ್ಟ ಜಿಎಸ್ ಟಿ ಪದ್ಧತಿ, ಕರಾಳ ಕೃಷಿ ಕಾಯ್ದೆಯಿಂದ ದೇಶಕ್ಕೆ ನಷ್ಟವಾಗಿದೆ. ಈಗಿನ ಬಿಜೆಪಿ ಸರ್ಕಾರ ಯಾವುದೇ ಕಾರಣಕ್ಕೂ ಜನರಿಗೆ ಉದ್ಯೋಗ ನೀಡಲು ಸಾಧ್ಯವಿಲ್ಲ. ಕಾರಣ, ಉದ್ಯೋಗ ನೀಡುವ ಶಕ್ತಿಯಾಗಿದ್ದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಬಿಜೆಪಿ ನಾಶ ಮಾಡಿದೆ. ಇಂದಿನ ಭಾರತ ತನ್ನ ಯುವಕರಿಗೆ ಉದ್ಯೋಗ ನೀಡಲು ಸಾಧ್ಯವಾಗುತ್ತಿಲ್ಲ. ಇದರಿಂದ ದೇಶಕ್ಕೆ ನಷ್ಟವಾಗಿದ್ದು, ಮುಂದೆ ಇನ್ನು ಅಪಾಯ ಎದುರಾಗಲಿದೆ. ಈ ವಿಚಾರಗಳ ಬಗ್ಗೆ ಬಿಜೆಪಿ ಎಂದೂ ಮಾತನಾಡುವುದಿಲ್ಲ.

ಮೊದಲು ಮೋದಿ ಅವರು ಚುನಾವಣೆ ಸಮಯದಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದರು. ಆದರೆ ಇಂದು ಅವರು ಕರ್ನಾಟಕಕ್ಕೆ ಬಂದು ಭ್ರಷ್ಟಾಚಾರದ ಬಗ್ಗೆ ಮಾತನಾಡಿದರೆ, ಶೇ. 40 ಕಮಿಷನ್ ಭ್ರಷ್ಟಾಚಾರ ಸರ್ಕಾರದ ಬಗ್ಗೆ ಹೇಳಿ, ನಾನು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತೇನೆ ಎಂದರೆ ಇಡೀ ರಾಜ್ಯವೇ ನಗಲಿದೆ. ದೇಶದ ಅತಿ ದೊಡ್ಡ ಭ್ರಷ್ಟ ಸರ್ಕಾರ ಕರ್ನಾಟಕದಲ್ಲಿದೆ. ಇದು 40% ಸರ್ಕಾರ ಎಂದು ನಾವು ಹೇಳುತ್ತಿಲ್ಲ, ಗುತ್ತಿಗೆದಾರರ ಸಂಘ ಹೇಳುತ್ತಿದೆ. ಆದರೆ ಮೋದಿ ಅವರು ಬಂದು ಭ್ರಷ್ಟಾಚಾರದ ವಿರುದ್ದ ಮಾತನಾಡಿದರೆ ಅದೊಂದು ಅಪಹಾಸ್ಯವಾಗಲಿದೆ. ಕೇವಲ ಕರ್ನಾಟಕ ಮಾತ್ರವಲ್ಲ ದೇಶದ ಯಾವುದೇ ಭಾಗದಲ್ಲಿ ಭ್ರಷ್ಟಾಚಾರ ವಿರುದ್ದ ಹೋರಾಡುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.


ಕರ್ನಾಟಕದ ಯಾವುದೇ ಬಿಜೆಪಿ ನಾಯಕ, ರಾಷ್ಟ್ರೀಯ ನಾಯಕರು ನಿರುದ್ಯೋಗ, ಆರ್ಥಿಕತೆ, ಭ್ರಷ್ಟಾಚಾರದ ವಿಚಾರವಾಗಿ ಮಾತನಾಡಲು ಸಾಧ್ಯವಿಲ್ಲ. ಬಿಜೆಪಿಯ ಉದ್ದೇಶ ಬಡವರ ಹಣವನ್ನು ಕಿತ್ತುಕೊಂಡು ದೊಡ್ಡ ಉದ್ಯಮಿಗಳಿಗೆ ನೀಡುವುದಾಗಿದೆ. ಇವರು ಕೆಲವು ಉದ್ಯಮಿಗಳಿಗೆ ಹಣ ಸಂದಾಯ ಮಾಡುವ ಕೆಲಸ ಮಾಡುತ್ತಿದ್ದಾರೆ. ದೇಶವನ್ನು ಒಡೆದು ಈ ಕೆಲಸ ಮಾಡುತ್ತಿದ್ದಾರೆ ಎಂದರು.

Also read: ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಡಾ: ಶ್ರೀ ಶಿವಕುಮಾರ ಸ್ವಾಮೀಜಿಗಳ ಹೆಸರು: ಸಿಎಂ ಬೊಮ್ಮಾಯಿ

ಬಿಜೆಪಿ ಧರ್ಮಗಳ ನಡುವೆ, ಜಾತಿಗಳ ನಡುವೆ ಸಂಘರ್ಷ ತರುತ್ತಿದೆ. ಈ ಪರಿಸ್ಥಿತಿಯಲ್ಲಿ ನಮ್ಮ ನಿಜವಾದ ಜವಾಬ್ದಾರಿ ಏನು ಎಂದರೆ, ರಾಜ್ಯ ಹಾಗೂ ದೇಶಕ್ಕೆ ಅಗತ್ಯವಿರುವ ವಿಚಾರಗಳನ್ನು ಎತ್ತುವುದಾಗಿದೆ. ಉದ್ಯೋಗ ನೀಡುವುದು, ಆರ್ಥಿಕತೆ ಸರಿಪಡಿಸುವುದು, ದೇಶದ ವಿವಿಧ ಸಮುದಾಯದವರನ್ನು ಒಟ್ಟಿಗೆ ತರುವುದಾಗಿದೆ. ಬಿಜೆಪಿ ಕೆಲಸ ಒಡೆಯುವುದಾದರೆ, ನಮ್ಮ ಕೆಲಸ ಒಂದುಗೂಡಿಸುವುದಾಗಿದೆ. ಇದನ್ನು ಕರ್ನಾಟಕದಲ್ಲಿ ಮಾಡಿ ತೋರಿಸಬೇಕಿದೆ.

ದೇಶದಲ್ಲಿ ಅತಿ ಹೆಚ್ಚು ಸದಸ್ಯತ್ವವನ್ನು ಮಾಡಿರುವ ರಾಜ್ಯ ಕರ್ನಾಟಕವಾಗಿದೆ. 70 ಲಕ್ಷ ಸಂಖ್ಯೆಯಲ್ಲಿ ಬಹುತೇಕರು ಯುವಕರಾಗಿದ್ದಾರೆ. ನಾವು ಈ ಚುನಾವಣೆಯಲ್ಲಿ ಎರಡು ವಿಚಾರದ ಬಗ್ಗೆ ಗಮನಹರಿಸಬೇಕಿದೆ. ಒಂದು ಯುವಕರು ಮತ್ತೊಂದು ಮಹಿಳೆಯರು. ನಾವು ಟಿಕೆಟ್ ನೀಡುವುದಾಗಿರಲಿ, ಸಂಘಟನೆ ಮಾಡುವುದರಲ್ಲಾಗಲಿ ಯುವಕರು ಹಾಗೂ ಮಹಿಳೆಯರಿಗೆ ಹೆಚ್ಚು ಅವಕಾಶ ನೀಡಬೇಕು. ಪ್ರಮುಖ ವಿಚಾರವಾಗಿ ಹೋರಾಡಬೇಕು, ಬಿಜೆಪಿಯ ಸುಳ್ಳನ್ನು ಜನರ ಮುಂದೆ ಇಡಬೇಕು.

ಸಿದ್ದರಾಮಯ್ಯ ಅವರ ಸರ್ಕಾರ ಅತ್ಯುತ್ತಮ ಪ್ರಗತಿ ಸಾಧಿಸಿತ್ತು. ಇದನ್ನು ನಾವು ಜನರಿಗೆ ತಿಳಿಸಬೇಕು. ನಾವು ಏನು ಮಾಡಿದ್ದೆವು, ಮುಂದೆ ಏನು ಮಾಡುತ್ತೇವೆ ಎಂದು ಹೇಳಬೇಕು. 150 ಕ್ಕಿಂತ ಒಂದು ಕ್ಷೇತ್ರವೂ ಕಡಿಮೆ ಆಗಬಾರದು. ಇನ್ನು ನಮ್ಮ ಎಲ್ಲ ಹಿರಿಯ ನಾಯಕರನ್ನು ನಾನು ಸಾಕಷ್ಟು ಬಲ್ಲೆ. ನೀವು ಎಲ್ಲರೂ ಒಟ್ಟಾಗಿ ಹೋರಾಡಲೇಬೇಕು. ಇದು ನಿಮ್ಮ ಬಹುದೊಡ್ಡ ಜವಾಬ್ದಾರಿ. ನೀವದನ್ನು ಮಾಡುತ್ತಿದ್ದು, ನೀವೆಲ್ಲರೂ ಸೇರಿ 150 ಸೀಟು ತರಬೇಕು. ನೀವು ಯಾವಾಗ ಬಯಸುತ್ತೀರೋ ಆಗ ಎಲ್ಲಿ ಬೇಕಾದರೂ ನಾನು ಬರುತ್ತೇನೆ. ನಮ್ಮ ಬಳಿ ಹೆಚ್ಚು ಸಮಯವಿಲ್ಲ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ. ನಾವು ಯಾವ ರೀತಿ ಸರ್ಕಾರ ಮಾಡಬೇಕು ಎಂದರೇ, ಬಡವರು, ದುರ್ಬಲರು, ಸಣ್ಣ ಉದ್ದಿಮೆದಾರರಿಗೆ ಶಕ್ತಿ ತುಂಬಿ ರಾಜ್ಯವನ್ನು ಮತ್ತೆ ಪ್ರಗತಿಯ ಹಾದಿಗೆ ತರಬೇಕು. ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaRahul GandhiSate Newsಬೆಂಗಳೂರುರಾಹುಲ್ ಗಾಂಧಿ
Share198Tweet123Send
Previous Post

ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಡಾ: ಶ್ರೀ ಶಿವಕುಮಾರ ಸ್ವಾಮೀಜಿಗಳ ಹೆಸರು: ಸಿಎಂ ಬೊಮ್ಮಾಯಿ

Next Post

ಭಾರತೀಯ ಪತ್ರಿಕೋದ್ಯಮ ಸಂಕಷ್ಟದಲ್ಲಿದೆ: ಪತ್ರಕರ್ತ ಸಾಯಿನಾಥ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಾರತೀಯ ಪತ್ರಿಕೋದ್ಯಮ ಸಂಕಷ್ಟದಲ್ಲಿದೆ: ಪತ್ರಕರ್ತ ಸಾಯಿನಾಥ್

ಭಾರತೀಯ ಪತ್ರಿಕೋದ್ಯಮ ಸಂಕಷ್ಟದಲ್ಲಿದೆ: ಪತ್ರಕರ್ತ ಸಾಯಿನಾಥ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ವಿಜಯಪುರ ರೈಲ್ವೆ ನಿಲ್ದಾಣದಲ್ಲಿ ಸಂತ ಸೇವಾಲಾಲ್ ಜಯಂತಿ ಸಂಭ್ರಮ

ವಿಜಯಪುರ ರೈಲ್ವೆ ನಿಲ್ದಾಣದಲ್ಲಿ ಸಂತ ಸೇವಾಲಾಲ್ ಜಯಂತಿ ಸಂಭ್ರಮ

February 17, 2026
ಕನ್ಸರ್ವೆನ್ಸಿ ಅಂಚಿನಲ್ಲಿರುವ ಮರಗಳನ್ನು ಸಂರಕ್ಷಿಸಿ | ಪರಿಸರ ಹೋರಾಟಗಾರರ ಆಗ್ರಹ

ಕನ್ಸರ್ವೆನ್ಸಿ ಅಂಚಿನಲ್ಲಿರುವ ಮರಗಳನ್ನು ಸಂರಕ್ಷಿಸಿ | ಪರಿಸರ ಹೋರಾಟಗಾರರ ಆಗ್ರಹ

February 17, 2026
ಮಾರಿಕಾಂಬ ಜಾತ್ರೆ ಹಿನ್ನೆಲೆ | ‘ಡಂಗುರ’ ಪ್ರಚಾರಕ್ಕೆ ಚಾಲನೆ

ಮಾರಿಕಾಂಬ ಜಾತ್ರೆ ಹಿನ್ನೆಲೆ | ‘ಡಂಗುರ’ ಪ್ರಚಾರಕ್ಕೆ ಚಾಲನೆ

February 17, 2026
ಫೆ.24ರಿಂದ 28 ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ

ಫೆ.24ರಿಂದ 28 ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ

February 17, 2026
ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಕಿರು ನಾಟಕ ಸ್ಪರ್ಧೆ

ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಕಿರು ನಾಟಕ ಸ್ಪರ್ಧೆ

February 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL