ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆ ಕುರಿತಾಗಿ ರಾಷ್ಟ್ರೀಯ ತನಿಖಾ ದಳ ಎಫ್’ಐಆರ್ ದಾಖಲಿಸಿದ್ದು, ಕೋಮು ದಳ್ಳುರಿಯನ್ನು ಸೃಷ್ಠಿಸಿವುದೇ ಆರೋಪಿಗಳ ಉದ್ದೇಶವಾಗಿತ್ತು ಎಂಬ ಮಾಹಿತಿ ಹೊರಬಿದ್ದಿದೆ.
ಹರ್ಷ ಹಾಗೂ ಆರೋಪಿಗಳ ನಡುವೆ ಜೈಲಿನಲ್ಲಿ ಗಲಾಟೆಯಾಗಿತ್ತು. ಅದರ ದ್ವೇಷದ ಹಿನ್ನೆಲೆಯಲ್ಲಿ ಹರ್ಷನ ಹತ್ಯೆ ಮಾಡಲಾಗಿದೆ ಎಂದು ಆರಂಭದಲ್ಲಿ ಹೇಳಲಾಗಿತ್ತು. ಆದರೆ, ಸ್ಥಳೀಯ ಪೊಲೀಸರ ಪ್ರಾಥಮಿಕ ತನಿಖೆಯ ಆಧಾರದಲ್ಲಿ ಎನ್’ಐಎ ಅಧಿಕಾರಿಗಳು ಎಫ್’ಐಆರ್ ದಾಖಲಿಸಿದ್ದಾರೆ. ಇದರಂತೆ, ಹರ್ಷನ ಹತ್ಯೆ ಹಿಂದೆ ವೈಯಕ್ತಿಕ ದ್ವೇಷವಿರಲಿಲ್ಲ. ಬದಲಾಗಿ ಶಿವಮೊಗ್ಗ ಸೇರಿದಂತೆ ರಾಜ್ಯದಾದ್ಯಂತ ಕೋಮು ಗಲಭೆ ಸೃಷ್ಠಿಸುವ ಉದ್ದೇಶದಿಂದ ಹರ್ಷನನ್ನು ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳ ಮೂಲಕ ಜನರಲ್ಲಿ ಭಯ ಹುಟ್ಟಿಸಿ, ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಉದ್ದೇಶವಿತ್ತು ಎಂದು ಹೇಳಲಾಗಿದ್ದು, ಇದರ ಹಿಂದೆ ದೊಡ್ಡ ಸಂಚಿದೆ ಎಂಬ ಅನುಮಾನಗಳು ವ್ಯಕ್ತವಾಗಿದೆ.











Discussion about this post