ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಆವರಣದಲ್ಲಿ ಎರಡು ಆನೆಗಳು ಕಾಣಿಸಿಕೊಂಡಿದ್ದು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದ ಆತಂಕಕ್ಕೆ ಕಾರಣವಾಗಿದೆ.
ಸಂಜೆ ಆರು ಗಂಟೆ ವೇಳೆಗೆ ಸಿಬ್ಬಂದಿ ಕ್ವಾರ್ಟರ್ಸ್ ಬಳಿ ಕಾಣಿಸಿಕೊಂಡ ಆನೆಗಳು ಸಂಜೆ 7.30ರ ಹೊತ್ತಿಗೆ ಕುವೆಂಪು ಪ್ರತಿಮೆ, ಗ್ರಂಥಾಲಯದ ಮುಂದೆ ನಡೆದಾಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಸೆಕ್ಯೂರಿಟಿ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್’ಗಳಿಂದ ಹೊರಬರದಂತೆ ಸೂಚನೆ ನೀಡಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಧಾವಿಸಲಿದ್ದಾರೆ ಎಂದು ವಿವಿ ಮೂಲಗಳಿಂದ ತಿಳಿದುಬಂದಿದೆ.
ಅರಣ್ಯ ಇಲಾಖೆ ಸ್ಥಾನಕ್ಕೆ ಧಾವಿಸಿದ್ದು, ಆನೆಗಳನ್ನು ಕ್ವಾರ್ಟರ್ಸ್ ಹಿಂಭಾಗದಿಂದ ಅರಣ್ಯಕ್ಕೆ ಕಳುಹಿಸುವ ಪ್ರಯತ್ನದಲ್ಲಿದ್ದಾರೆ. ಇನ್ನೊಂದೆಡೆ ಹಾಸ್ಟೆಲ್ ಮ್ಯಾನೇಜರ್’ಗಳು ವಿದ್ಯಾರ್ಥಿಗಳ ಸುರಕ್ಷತೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಎಚ್ಚರಿಕೆ ವಹಿಸುತ್ತಿರುವ ದೃಶ್ಯಗಳು ಕಂಡು ಬಂದವು.
ಕತ್ತಲಾದ ನಂತರ, ಬೆಳಗಿನ ಜಾವ ವಿದ್ಯಾರ್ಥಿಗಳು ಹೊರಕ್ಕೆ ಬಾರದಂತೆ ಅರಣ್ಯ ಇಲಾಖೆ ಸಿಬ್ಬಂದಿಗಳು ಮೈಕ್ ಮೂಲಕ ಘೋಷಣೆ ಮಾಡುತ್ತಿದ್ದಾರೆ. ಮುಂಜಾನೆ 7 ಗಂಟೆಯವರೆಗೂ ಹೊರಕ್ಕೆ ಬರುವುದು, ಒಬ್ಬರೇ ಓಡಾಡುವುದು ಮಾಡಬಾರದು ಎಂದು ಸೂಚನೆ ನೀಡಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post