ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸೆಪ್ಟೆಂಬರ್ 2021ರಲ್ಲಿ ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ರಾಜೀನಾಮೆ ನೀಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರ್ ರಾವ್ Bhaskar Rao ಆಮ್ ಆದ್ಮಿ ಪಕ್ಷ Aam Aadmi Party ಸೇರ್ಪಡೆಯಾಗಿದ್ದಾರೆ.
ನವದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಎಎಪಿ ಕಚೇರಿಯಲ್ಲಿ ಇಂದು ಆಪ್ ನಾಯಕ ಹಾಗೂ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಂದ ಸದಸ್ಯತ್ವ ಸ್ವೀಕರಿಸಿದ್ದಾರೆ.
ಈ ಸಂದರ್ಭದಲ್ಲಿ ಮನೀಶ್ ಸಿಸೋಡಿಯಾ ಮತ್ತಿತರ ನಾಯಕರು ಉಪಸ್ಥಿತರಿದ್ದರು.
Also read: ದೇವಾಲಯದ ಧ್ವನಿವರ್ಧಕಗಳಲ್ಲಿ ಮೊಳಗಲಿದೆ ರಾಮ ಭಜನೆ, ಶಿವ ನಾಮ ಸ್ಮರಣೆ!
1954ರಂದು ಜನಿಸಿದ ಭಾಸ್ಕರ್ ರಾವ್ 2019-20ರ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದರು. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, ಆಂತರಿಕ ಭದ್ರತಾ ವಿಭಾಗದಲ್ಲಿ ಕೂಡ ಕೆಲಸ ನಿರ್ವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post