ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪ್ರತಿ ಯೂನಿಟ್‌ಗೆ 35 ಪೈಸೆ ವಿದ್ಯುತ್ ದರ ಹೆಚ್ಚಳ ಮಾಡುವ ಮೂಲಕ ರಾಜ್ಯ ಸರ್ಕಾರ ಜನತೆಗೆ ದೊಡ್ಡ ಶಾಕ್ ನೀಡಿದೆ.
ಈಗಾಗಲೇ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆ ಈಗ ವಿದ್ಯುತ್ ದರ Electricity bill ಏರಿಕೆ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ಪ್ರತಿ ಯೂನಿಟ್‌ಗೆ 35 ಪೈಸೆ ಹೆಚ್ಚಳ ಮಾಡಿದ್ದು, ಏಪ್ರಿಲ್ 1 ರಿಂದಲೇ ಈ ಪರಿಷ್ಕೃತ ವಿದ್ಯುತ್ ದರ ಜಾರಿಗೆ ಬರಲಿದೆ.
Also read: ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ಅವರಿಂದ “ಕೃತ್ಯ” ಚಿತ್ರದ ಫಸ್ಟ್ ಲುಕ್ ಬಿಡುಗಡೆ
2022-23ನೇ ಆರ್ಥಿಕ ವರ್ಷದಲ್ಲಿ ಉಂಟಾಗುವ ಆದಾಯ ಕೊರತೆಯ ಮೊತ್ತ 2159.48 ಕೋಟಿ ರೂ.ಗಳನ್ನು ಮರು ಪಡೆಯಲು ದರ ಹೆಚ್ಚಳ ಅನಿವಾರ್ಯವಾಗಿದೆ. ಸದರಿ ಮೊತ್ತವು ಆರ್ಥಿಕ ವರ್ಷ 2020-21ರ ಕೊರತೆಯ ಮೊತ್ತ ರೂ. 1700.49 ಕೋಟಿ ರೂ.ಗಳನ್ನು ಒಳಗೊಂಡಿರುತ್ತದೆ ಎಂದು ಕೆಇಆರ್‌ಸಿ ಹೇಳಿದೆ.

ಬೆಸ್ಕಾಂ, ಹೆಸ್ಕಾಂ, ಜೆಸ್ಕಾಂ, ಮೆಸ್ಕಾಂ ಎಲ್ಲಾ ನಿಗಮಗಳಲ್ಲೂ 35 ಪೈಸೆ ಹೆಚ್ಚಳ ಮಾಡಲಾಗಿದೆ. ಕೇವಲ ವಿದ್ಯುತ್ ದರ ಏರಿಕೆ ಮಾತ್ರವಲ್ಲ, ವಿದ್ಯುತ್ ನಿಗದಿತ ಶುಲ್ಕವೂ ಹೆಚ್ಚಳವಾಗಿದೆ. ಫಿಕ್ಸೆಡ್ ದರವನ್ನು 10 ರಿಂದ 30 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















