ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಭದ್ರಾವತಿ ನಗರವ್ಯಾಪ್ತಿಯಲ್ಲಿ ಗಾಂಧಿನಗರದ ತಮ್ಮಣ್ಣ ಕಾಲೋನಿಯಲ್ಲಿ ಹರಿಯುವ ಕೆರೆ ಕೋಡಿ ದುರಸ್ತಿಯಲ್ಲಿದ್ದು ಗ್ರಾಮಸ್ಥರು ಮತ್ತು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀನಾಥ್ ಅವರ ಮನವಿಯ ಮೇರೆಗೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷೆ ಪವಿತ್ರ ರಾಮಯ್ಯ ಇಂದು ಸಂಜೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
Also read: ಸಾಗರ: ಪುನೀತ್ ರಾಜ್‌ಕುಮಾರ್ ಅಮ್ಯೂಸ್ ಮೆಂಟ್ ಪಾರ್ಕ್‌ಗೆ ಶಾಸಕ ಹಾಲಪ್ಪ ಚಾಲನೆ
ರೈತರ ಜಮೀನಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಶಿಥಿಲಾವಸ್ಥೆ ತಲುಪಿದೆ. ಕೆರೆಯ ಕೋಡಿಗೆ ಮೇಲ್ಸೇತುವೆ ನಿರ್ಮಿಸುವಂತೆ ಮನವಿ ಮಾಡಲಾಯಿತು. ಸ್ಥಳದಲ್ಲಿ ರೈತರು ಗ್ರಾಮಸ್ಥರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post