Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ. ವಿ ಶ್ರೀನಿವಾಸ್ ಹಾಗೂ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹಮದ್ ನಲಪಾಡ್ ನಿರ್ದೇಶನದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಜನವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ನಗರದ ಮಹಾವೀರ ವೃತ್ತದಲ್ಲಿ ಏ.9ರಂದು ಶನಿವಾರ ಬೆಳಗ್ಗೆ 11:30 ಕೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ ತಿಳಿಸಿದ್ದಾರೆ.
![](data:image/svg+xml,%3Csvg%20xmlns='http://www.w3.org/2000/svg'%20viewBox='0%200%20576%20719'%3E%3C/svg%3E)
ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಹಾಗೂ ಏ.10ರ ಭಾನುವಾರ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರದ 14 ಬ್ಲಾಕ್ ಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಯನ್ನು ಬ್ಲಾಕ್ ಮಟ್ಟದಲ್ಲಿ ನಡೆಸಲಾಗುವುದು, ಈ ಬೃಹತ್ ಪ್ರತಿಭಟನೆಗೆ ಜಿಲ್ಲೆಯ ಪಕ್ಷದ ಎಲ್ಲಾ ನಾಯಕರು, ಮುಖಂಡರುಗಳು , ಎಲ್ಲಾ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಪದಾಧಿಕಾರಿಗಳು ಹಾಗೂ ಯುವ ಕಾಂಗ್ರೆಸ್‌ನ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಅವರು ಮನವಿ ಮಾಡಿದ್ದಾರೆ.

Discussion about this post