No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Monday, May 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಮಾನತೆ, ಧರ್ಮನಿರಪೇಕ್ಷ ಆಧುನಿಕ ಭಾರತದ ನಿರ್ಮಾತೃ ಅಂಬೇಡ್ಕರ್: ನಟರಾಜ್ ಹುಳಿಯಾರ್ ಅಭಿಪ್ರಾಯ

ಕುವೆಂಪು ವಿವಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ 131ನೇ ಜಯಂತಿ ಆಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 19, 2022
in ಶಿವಮೊಗ್ಗ
0
ಸಮಾನತೆ, ಧರ್ಮನಿರಪೇಕ್ಷ ಆಧುನಿಕ ಭಾರತದ ನಿರ್ಮಾತೃ ಅಂಬೇಡ್ಕರ್: ನಟರಾಜ್ ಹುಳಿಯಾರ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ   |

ಡಾ. ಬಿ. ಆರ್. ಅಂಬೇಡ್ಕರ್ ಭಾರತದ 130 ಕೋಟಿ ಜನರಿಗೆ ಮುಕ್ತವಾಗಿ ಸಾಮಾಜಿಕ ನ್ಯಾಯದ ಬಾಗಿಲು ತೆರೆದವರು. ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಮಹಿಳೆಯರು, ಹೀಗೆ ಎಲ್ಲರಿಗೂ ಮುಕ್ತ ಅವಕಾಶಗಳಿರುವ ಸಮಾನತೆ ಮತ್ತು ಧರ್ಮನಿರಪೇಕ್ಷ ಭಾರತವನ್ನು ಕಟ್ಟಿದ ಆಧುನಿಕ ಭಾರತದ ನಿರ್ಮಾತೃ ಎಂದು ಹಿರಿಯ ಸಾಹಿತಿ ಮತ್ತು ಬೆಂಗಳೂರು ವಿವಿ ಇಂಗ್ಲಿಷ್ ಪ್ರಾಧ್ಯಾಪಕ ಡಾ. ನಟರಾಜ್ ಹುಳಿಯಾರ್ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ Kuvempu University ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ವತಿಯಿಂದ ಮಂಗಳವಾರ ಜ್ಞಾನಸಹ್ಯಾದ್ರಿಯ ಪ್ರೊ. ಎಸ್. ಪಿ. ಹಿರೇಮಠ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಡಾ. ಬಿ. ಆರ್. ಅಂಬೇಡ್ಕರ್ ಅವರ 131ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಾಲ್ಯಾವಸ್ಥೆಯಿಂದ ಹಿಡಿದು ಜೀವನದ ಅಂತಿಮ ಘಟ್ಟದವರೆವಿಗೂ ಹತ್ತು ಹಲವು ಜಾತಿ ತಾರತಮ್ಯಗಳ ಅವಮಾನಗಳನ್ನು ಅನುಭವಿಸಿದರೂ ವಿಚಲಿತರಾಗದ ಅಂಬೇಡ್ಕರ್ ಅವರಿಗೆ ಶ್ರೇಣೀಕರಣ ಜಾತಿವ್ಯವಸ್ಥೆ ಹಾಸುಹೊಕ್ಕಾಗಿರುವ ಸಾಂಪ್ರದಾಯಿಕ ಸಮಾಜವೇ, ದೀನ ದಲಿತರಷ್ಟೇ ಅಲ್ಲದೆ ಸರ್ವರ ಒಳಿತಿಗೆ ಶ್ರಮಿಸುವ ನಿಟ್ಟಿನಲ್ಲಿ ಉನ್ನತ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಪ್ರೇರಣೆಯಾಯಿತು.

ಸಮಾಜದ ಎಲ್ಲ ವರ್ಗಗಳನ್ನು ಒಳಗೊಳ್ಳುವ ವಿಮೋಚನೆಯ ಸೈದ್ಧಾಂತಿಕ ಚಿಂತನೆಯನ್ನು ಕಠಿಣ ಪರಿಶ್ರಮ ಮತ್ತು ಅಧ್ಯಯನಶೀಲತೆಯಿಂದ ಸಾಧಿಸಿ ನಾವು ಕಾಣದ ಭಾರತವನ್ನು ತೋರಿಸಿದವರು ಅಂಬೇಡ್ಕರ್. ನೆಹರು ಅನಾವರಣಗೊಳಿಸಿದ ಭಾರತದರ್ಶನಕ್ಕಿಂತ ಅಂಬೇಡ್ಕರ್ ಮತ್ತು ಗಾಂಧಿ ತೋರಿದ ಭಾರತ ಈ ನೆಲಕ್ಕೆ ಹೆಚ್ಚು ಹತ್ತಿರವಾದದ್ದು. ಸಾಮಾಜಿಕ, ಆರ್ಥಿಕ, ರಾಜಕೀಯ ಮತ್ತು ಸಾಂಸ್ಕೃತಿಕ ವಿಮೋಚನಕಾರರಾಗಿ ಅಂಬೇಡ್ಕರ್ ಈ ದೇಶಕ್ಕೆ ಸಾರ್ವಕಾಲಿಕವಾಗಿ ಮಾದರಿಯಾಗಿ ನಿಲ್ಲುವ ಮೇರು ವ್ಯಕ್ತಿತ್ವ ಎಂದರು.

Also read: ಪೋಷಣ ಅಭಿಯಾನ: ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಸಮರ್ಪಣೆ

14 ಕೃತಿಗಳ ಲೋಕಾರ್ಪಣೆ: ಅಂಬೇಡ್ಕರ್ ಚಿಂತನೆ ಮತ್ತು ವಿಚಾರಧಾರೆಗಳ ಅನ್ವಯಿಕತೆಯ ಬಗ್ಗೆ ವಿಶ್ವವಿದ್ಯಾಲಯದ ಪ್ರಸಾರಾಂಗ ಪ್ರಕಟಿಸಿರುವ 14 ಕೃತಿಗಳನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆಗೊಳಿಸಲಾಯಿತು. ಕೃತಿಗಳ ಕುರಿತು ಸಾಹಿತಿ ಪ್ರೊ. ಎಚ್. ಲಿಂಗಪ್ಪ ಮಾತನಾಡಿ, ಅಂಬೇಡ್ಕರ್ ಕೇವಲ ಸಂವಿಧಾನ ತಜ್ಞರಾಗಿರಲಿಲ್ಲ, ಎಲ್ಲ ವಿಷಯಗಳಿಗೂ ವ್ಯಾಪಿಸಿರುವ ತತ್ವಜ್ಞಾನಿಯಾಗಿದ್ದರು ಎನ್ನುವುದಕ್ಕೆ ಶಿಕ್ಷಣ, ಆಧ್ಯಾತ್ಮ, ನಿರ್ವಹಣಾ ಶಾಸ್ತ್ರ, ಮಹಿಳಾವಾದ, ಸಂವಹನಶಾಸ್ತ್ರ, ಸಾಹಿತ್ಯ, ಹೀಗೆ ಹತ್ತು ಹಲವು ವಿಚಾರಗಳ ಮೇಲೆ ಬಂದಿರುವ ಈ ಸಂಶೋಧನಾ ಕೃತಿಗಳೇ ಸಾಕ್ಷಿ ಎಂದು ಶ್ಲಾಘಿಸಿದರು.

ಬಾಕ್ಸ್ ಐಟಮ್: ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಮಾತನಾಡಿ, ಕಳೆದ ಎರಡು ವರ್ಷಗಳ ಹಿಂದೆಯೇ ಸಿಂಡಿಕೇಟ್ ಸಭೆಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲು ನಿರ್ಣಯ ಕೈಗೊಳ್ಳಲಾಗಿದ್ದು, ಅತಿ ಶೀಘ್ರದಲ್ಲಿ ವಿಶ್ವವಿದ್ಯಾಲಯದ ಗ್ರಂಥಾಲಯದ ಮುಂಭಾಗ ಪ್ರತಿಮೆ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು. ಅಂಬೇಡ್ಕರ್ ಅವರು ಸಾಧಿಸಿದ ಅಧ್ಯಯನಶೀಲತೆ, ಶೈಕ್ಷಣಿಕ ಶಿಸ್ತು, ಮತ್ತು ಎಲ್ಲ ಸವಾಲುಗಳನ್ನು ಮೆಟ್ಟಿ ನಿಂತ ನಾಯಕತ್ವ ಈ ತಲೆಮಾರಿನ ವಿದ್ಯಾರ್ಥಿಗಳಿಗೆ ಮಾದರಿಯಾಗಲಿ ಎಂಬ ಸದಾಶಯದಿಂದ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗುವುದು. ಅಂಬೇಡ್ಕರ್ ಜೊತೆಗೆ ಬುದ್ಧ, ಬಸವಣ್ಣ ಮತ್ತು ಗಾಂಧಿ ಪ್ರತಿಮೆಗಳನ್ನು ಕೂಡ ಸೂಕ್ತ ಸ್ಥಳಗಳಲ್ಲಿ ಸ್ಥಾಪಿಸಲಾಗುವುದು ಎಂದರು.

ಕುಲಸಚಿವೆ ಜಿ. ಅನುರಾಧ, ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಕೆ. ನವೀನ್ ಕುಮಾರ್, ಹಣಕಾಸು ಅಧಿಕಾರಿ ಎಸ್. ರಾಮಕೃಷ್ಣ, ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ. ಬಿ. ಎಚ್. ಅಂಜನಪ್ಪ, ಪ್ರೊ. ಎ. ರಾಮೇಗೌಡ, ಪ್ರೊ. ಕೃಷ್ಣ, ಡಾ. ನೆಲ್ಲಿಕಟ್ಟೆ ಸಿದ್ದೇಶ್, ಡಾ. ಅಣ್ಣಯ್ಯ, ಕೃತಿಗಳ ಲೇಖಕರು, ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಅಧ್ಯಾಪಕೇತರ ನೌಕರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversityLatest News KannadaLocal NewsMalnad NewsNewsinKannadaNewsKannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share206Tweet123Send
Previous Post

ಪೋಷಣ ಅಭಿಯಾನ: ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಸಮರ್ಪಣೆ

Next Post

ಸಚಿವರಾಗುತ್ತಾರಾ ಅಭಿವೃದ್ಧಿಯ ಹರಿಕಾರ, ಕ್ರಿಯಾಶೀಲ ಶಾಸಕ ಹಾಲಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
192ಎ ಕಾಯ್ದೆಯ ವ್ಯಾಪ್ತಿಯಿಂದ ಮಲೆನಾಡು ಪ್ರದೇಶ ಕೈಬಿಡುವಂತೆ ಹರತಾಳು ಹಾಲಪ್ಪ ಆಗ್ರಹ

ಸಚಿವರಾಗುತ್ತಾರಾ ಅಭಿವೃದ್ಧಿಯ ಹರಿಕಾರ, ಕ್ರಿಯಾಶೀಲ ಶಾಸಕ ಹಾಲಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಶಿವಮೊಗ್ಗ | ಲೋನ್ ಕೊಡಿಸುವುದಾಗಿ ನಂಬಿಸಿ ಸೈಬರ್ ವಂಚನೆ | ಹೇಗಾಯ್ತು ಘಟನೆ?

May 25, 2026
ಕ್ರಿಕೆಟ್ ಆಡುವಾಗಲೇ ಹೃದಯಾಘಾತದಿಂದ ಕೋಚ್ ಅಕ್ಷಯ್ ನಿಧನ | ಡಿ.ಎಸ್. ಅರುಣ್ ಸಂತಾಪ

ಕ್ರಿಕೆಟ್ ಆಡುವಾಗಲೇ ಹೃದಯಾಘಾತದಿಂದ ಕೋಚ್ ಅಕ್ಷಯ್ ನಿಧನ | ಡಿ.ಎಸ್. ಅರುಣ್ ಸಂತಾಪ

May 25, 2026
ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ | 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

ಮತ್ತೊಮ್ಮೆ ಬೆಲೆ ಏರಿಕೆಯ ಹೊರೆ | ಪೆಟ್ರೋಲ್, ಡೀಸೆಲ್ ದರ ಹೆಚ್ಚಳ

May 25, 2026
ಉತ್ತರ ಕನ್ನಡ | ಕಡಲತೀರದಲ್ಲಿ ಭೀಕರ ದುರಂತ | ಮೃತರ ಸಂಖ್ಯೆ 11ಕ್ಕೆ ಏರಿಕೆ | ಹೇಗಾಯ್ತು ಘಟನೆ?

ಉತ್ತರ ಕನ್ನಡ | ಕಡಲತೀರದಲ್ಲಿ ಭೀಕರ ದುರಂತ | ಮೃತರ ಸಂಖ್ಯೆ 11ಕ್ಕೆ ಏರಿಕೆ | ಹೇಗಾಯ್ತು ಘಟನೆ?

May 25, 2026
ಬಹುತೇಕ ಜನರ ಸಮಸ್ಯೆಗೆ ಅವಿಭಕ್ತ ಕುಟುಂಬವೇ ಅಂತಿಮ ಪರಿಹಾರ | ಸತ್ಯಾತ್ಮ ತೀರ್ಥ ಸ್ವಾಮೀಜಿ

ಬಹುತೇಕ ಜನರ ಸಮಸ್ಯೆಗೆ ಅವಿಭಕ್ತ ಕುಟುಂಬವೇ ಅಂತಿಮ ಪರಿಹಾರ | ಸತ್ಯಾತ್ಮ ತೀರ್ಥ ಸ್ವಾಮೀಜಿ

May 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL